ಡಿ.1ರಂದು ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ

sportsday
Sports, set of athletes of various sports disciplines. Isolated vector silhouettes. Run, soccer, hockey, volleyball, basketball, rugby, baseball, american football, cycling, golf
Published on

ಮೈಸೂರು: ಕರುನಾಡ ಸೇನೆ ಹಾಗೂ ಮೈಸೂರು ಜಿಲ್ಲಾ ದೇಹದಾರ್ಢ್ಯ ಮತ್ತು ಫಿಟ್ನೆಸ್ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಿ.1ರಂದು ನಗರದ ಪುರಭವನದಲ್ಲಿ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿದೆ ಎಂದು ದೇಹದಾರ್ಢ್ಯ ಸಂಸ್ಥೆಯ ಕಾರ್ಯದರ್ಶಿ ಎಂ.ಮಂಜುನಾಥ್ ತಿಳಿಸಿದರು.

ಶಾರ್ಟ್, ಮೀಡಿಯಂ, ಟಾಪ್, ಸೂಪರ್ ಟಾಲ್ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಪ್ರತಿಯೊಂದರಲ್ಲಿಯೂ ನಗದು ಬಹುಮಾನವಿದೆ. ಇದಕ್ಕೆ ನೋಂದಣಿ ಶುಲ್ಕ 500 ರೂ.ಗಳಾಗಿದೆ. ಮೈಸೂರು ನಗರ, ಹುಣಸೂರು, ಎಚ್.ಡಿ.ಕೋಟೆ, ತಿ.ನರಸೀಪುರ, ಪಿರಿಯಾಪಟ್ಟಣ ಮತ್ತು ಕೆ.ಆರ್.ನಗರದ ತಾಲೂಕಿನವರು ಮಾತ್ರ ಪಾಲ್ಗೊಳ್ಳಬಹುದಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net