ಡಿ.26ರಂದು ಬೈಕ್ ರ‌್ಯಾಲಿ

03 SARAG 1
ಸರಗೂರು ಪಟ್ಟಣದ ಎಪಿಎಂಸಿ ಆವರಣದಲ್ಲಿ ರಾಜ್ಯ ರೈತ ಸಂಘ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ತಾಲೂಕು ಅಧ್ಯಕ್ಷ ಸಿಂಗೇಗೌಡ ಮಾತನಾಡಿದರು. ಗಣೇಶ್, ಬೀರ್ವಾಳ್ ಮಹಾಲಿಂಗ, ನವೀನ್, ಬೀರೇಶ್, ಶಿವಪ್ಪ ಇತರರು ಇದ್ದರು.
Published on

ಸರಗೂರು: ಚಿಕ್ಕಬರಗಿ ಗ್ರಾಮದ ರಸ್ತೆ ಅಭಿವೃದ್ಧಿಗೆ ಒತ್ತಾಯಿಸಿ ಡಿ.26ರಂದು ಪಟ್ಟಣದಲ್ಲಿ ಬೈಕ್ ರ‌್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಸಿಂಗೇಗೌಡ ತಿಳಿಸಿದರು.

ಪಟ್ಟಣದ ಎಪಿಎಂಸಿ ಆವರಣದಲ್ಲಿ ಶನಿವಾರ ರೈತ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಗಡಿಭಾಗದ ಚಿಕ್ಕಬರಗಿ ಗ್ರಾಮದ ರಸ್ತೆ ತೀರಾ ಅವ್ಯವಸ್ಥೆಯಿಂದ ಕೂಡಿದ ಕಾಮಗಾರಿ ಮಾಡುವಂತೆ ಅನೇಕ ಬಾರಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಡಿ.26 ರಂದು ಬೈಕ್ ರಯಾಲಿ ನಡೆಸಲಾಗುವುದು ಎಂದು ತಿಳಿಸಿದರು.

ಮುತ್ತಿಗೆಹುಂಡಿ ಸರ್ಕಲ್‌ನಿಂದ ಶಿವಪುರ, ದೊಡ್ಡಬರಗಿ, ಚಿಕ್ಕಬರಗಿವರೆಗಿನ ರಸ್ತೆ ತುಂಬ ಹದೆಗಟ್ಟಿದೆ. ಹಲವಾರು ಬಾರಿ ಅಧಿಕಾರಿಗಳಿಗೆ ಮನವಿ ಕೊಟ್ಟಿದ್ದರೂ ಯಾರೂ ಗಮನ ಹರಿಸಿಲ್ಲ. ಹಾಗಾಗಿ ಸರ್ಕಾರ ಮತ್ತು ಅಧಿಕಾರಿಗಳ ಗಮನ ಸೆಳೆಯುವ ನಿಟ್ಟಿನಲ್ಲಿ ಬೈಕ್ ರ‌್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ರಾಜ್ಯ ರೈತ ಸಂಘ ತಾಲೂಕು ಉಪಾಧ್ಯಕ್ಷ ಗಣೇಶ್, ಪ್ರಧಾನ ಕಾರ್ಯದರ್ಶಿ ಬೀರ್ವಾಳ್ ಮಜಾಲಿಂಗ, ಯುವ ಘಕದ ಅಧ್ಯಕ್ಷ ನವೀನ್, ಉಪಾಧ್ಯಕ್ಷರಾದ ಬೀರೇಶ್, ಶಿವಪ್ಪ, ಪ್ರಧಾನ ಕಾರ್ಯದರ್ಶಿ ನವೀನ್, ಮಹಿಳಾ ಘಟಕದ ರೇಖಾ ಸಭೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net