ಡಿ ದರ್ಜೆ ನೌಕರ ನೇಣಿಗೆ ಶರಣು

hang
Published on

ಬೆಳಗಾವಿ: ನಗರದ ಪಿಬ್ಲುೃಡಿ ಸರ್ಕಲ್ ಕಚೇರಿಯಲ್ಲಿ ಡಿ ದರ್ಜೆ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿರುವ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದ ಬಸವರಾಜ ರಾಮು ದೇವಮಾನೆ (34) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಶ್ವೇಶ್ವರಯ್ಯ ನಗರದ ಸರ್ಕಾರಿ ಪಿಡಬ್ಲುೃಡಿ ಕ್ವಾರ್ಟರ್ಸ್‌ನಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾನೆ. ಬಸವರಾಜ, ಕುಡಿತದ ಚಟಕ್ಕೆ ಅಂಟಿಕೊಂಡಿದ್ದ.

ಮದ್ಯ ಸೇವನೆ ಬಿಡು ಎಂದು ಮನೆಯವರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net