ಡಿಕೆಶಿ ರಾಜೀನಾಮೆಗೆ ಒತ್ತಾಯ

25bdvt1 protest
ಡಿ.ಕೆ.ಶಿವಕುಮಾರ್ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ತಾಲೂಕು ಬಿಜೆಪಿ ಘಟಕದ ಕಾರ್ಯಕರ್ತರು ಭದ್ರಾವತಿಯಲ್ಲಿ ಪ್ರತಿಭಟನೆ ನಡೆಸಿದರು. ಜಿ.ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ಆನಂದಕುಮಾರ ಇತರರಿದ್ದರು.
Published on

ಭದ್ರಾವತಿ: ಮುಸ್ಲಿಮರಿಗೆ ಮೀಸಲಾತಿ ನೀಡುವಲ್ಲಿ ಅವಶ್ಯಕತೆ ಇದ್ದರೆ ಸಂವಿಧಾನವನ್ನೇ ಬದಲು ಮಾಡುತ್ತೇವೆ ಎಂದು ಉದ್ಧಟತನದ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಮಂಗಳವಾರ ತಾಲೂಕು ಬಿಜೆಪಿ ಘಟಕದ ಕಾರ್ಯಕರ್ತರು ರಂಗಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಶೇ.4ರ ಮೀಸಲಾತಿ ನೀಡಲು ಸಂವಿಧಾನವನ್ನೇ ಬದಲಿಸಲು ಹೊರಟಿರುವ ಡಿ.ಕೆ.ಶಿವಕುಮಾರ್ ಸಂವಿಧಾನಕ್ಕೆ ಅಗೌರವವಾಗಿ ನಡೆದುಕೊಳ್ಳುತ್ತಿದ್ದಾರೆ. ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರು ಡಿಕೆಶಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಒತ್ತಾಯಿಸಿದರು. ಮಂಡಲದ ತಾಲೂಕು ಅಧ್ಯಕ್ಷ ಜಿ.ಧರ್ಮಪ್ರಸಾದ್, ಪ್ರಮುಖರಾದ ಮಂಗೋಟೆ ರುದ್ರೇಶ್, ಜಿ.ಆನಂದಕುಮಾರ್, ಮಂಜಣ್ಣ, ಎಚ್.ಎಸ್.ಸುಬ್ಬಣ್ಣ, ರಾಜಶೇಖರ್, ಚನ್ನೇಶ್, ಅಣ್ಣಪ್ಪ, ಧನುಷ್, ನಂಜಪ್ಪ, ಮೂರ್ತಿ, ಮಂಜುಳಾ, ಸರಸ್ವತಿ, ಸುಲೋಚನಾ, ಲತಾ ಪ್ರಭಾಕರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net