

ತುಮಕೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದು ಕಾರು ಬೆಂಕಿಯಿAದ ಹೊತ್ತಿಉರಿದ ಘಟನೆಯಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊರಟಗೆರೆ ತಾಲ್ಲೂಕಿನ ಎಂಲೆರಾAಪುರ ಶನಿವಾರ ರಾತ್ರಿ ಘಟನೆ ಸಂಭವಿಸಿದ್ದು ಮೃತ ಮಹಿಳೆ ಹಾಗೂ ಗಾಯಾಳುಗಳ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಬೆಂಗಳೂರು ಕಡೆಯಿಂದ ಮಧುಗಿರಿ ಕಡೆಗೆ ಬರುತ್ತಿದ್ದ ಮಹೇಂದ್ರ ಟಿಯುವಿ ಕಾರು,
ಹಾಗೂ ಮಧುಗಿರಿ ಕಡೆಯಿಂದ ಬೆಂಗಳೂರು ಕಡೆಗೆ ಹೊರಟ್ಟಿದ್ದ ಇಟಿಯೋಸ್ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಇಟಿಯೋಸ್ ಕಾರು ಬೆಂಕಿಗೆ ಆಹುತಿಯಾಗಿದ್ದು ಮತ್ತೊಂದು ಕಾರು ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.