ಡಿಸಿಗಳ ಜತೆ ಪ್ರಧಾನಿ ವಿಡಿಯೋ ಕಾನ್ಫರೆನ್ಸ್

18Tmk_PM_DC_Conference
Published on

ತುಮಕೂರು :  ಪ್ರಧಾನಮಂತ್ರಿ ನರೇಂದ್ರ ಮೋದಿ ಕರೊನಾ ನಿಯಂತ್ರಣ ಸಂಬಂಧ ಮಂಂಗಳವಾರ ನಡೆಸಿದ ಜಿಲ್ಲಾಧಿಕಾರಿಗಳ ವಿಡಿಯೋ ಸಭೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧಸ್ವಾಮಿ ಸಹ ಹಾಜರಿದ್ದರು.

ಮಂಗಳವಾರದ ಮಹತ್ವದ ವಿಡಿಯೋ ಸಂವಾದದಲ್ಲಿ ಪ್ರಧಾನಿ ಮೋದಿ ಅವರು ಜಿಲ್ಲೆಯ ಬಗ್ಗೆ ಪ್ರತ್ಯೇಕ ಮಾಹಿತಿ ಏನು ಪಡೆಯಲಿಲ್ಲ. ಅಲ್ಲದೆ, ಪ್ರತ್ಯೇಕ ಸಲಹೆ ಏನೂ ನೀಡಲಿಲ್ಲ.

ವ್ಯಾಪಕವಾಗಿ ಹರಡಿರುವ 17 ಜಿಲ್ಲೆಗಳ ಜಿಲ್ಲಾಧಿಕಾರಿ ಜತೆಗಿನ ಸಂವಾದದಲ್ಲಿ ಹಳ್ಳಿಗಳಿಗೆ ಕರೊನಾ ಸೋಂಕು ಹಬ್ಬದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜನತಾಕರ್ಯ್ೂ, ಲೌಕ್‌ಡೌನ್‌ನಿಂದ ಜನರಿಗೆ ಯಾವುದೇ ತೊಂದರೆಯಾಗದಂತೆ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವಂತೆ ಸೂಚಿಸಿದರಲ್ಲದೆ, ಜನಪ್ರತಿನಿಧಿಗಳು, ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು. ವಿವಿಧ ಸಂಘ-ಸಂಸ್ಥೆಗಳು, ಸ್ವಯಂ ಸೇವಕರ ನೆರವಿನೊಂದಿಗೆ ಕರೊನಾ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಸಲಹೆಯಿತ್ತರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಎಸಿ ಅಜಯ್, ಡಿಎಚ್‌ಒ ಡಾ.ನಾಗೇಂದ್ರಪ್ಪ, ಜಿಲ್ಲಾ ಶಸ ಚಿಕಿತ್ಸಕ ಡಾ.ಸುರೇಶ್‌ಬಾಬು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net