

ಬೆಟ್ಟದಪುರ: ತಂಬಾಕು ಉತ್ಪನ್ನಗಳ ಸೇವನೆಯಿಂದ ಮನುಷ್ಯನ ಆರೋಗ್ಯ ಹಾಳಾಗುತ್ತಿದ್ದು, ತಂಬಾಕು ಮುಕ್ತ ಸಮಾಜ ಕಟ್ಟುವ ಕೆಲಸವಾಗಬೇಕು ಎಂದು ವೈದ್ಯಾಧಿಕಾರಿ ಡಾ.ಆರ್.ಸಂದೀಪ್ ಹೇಳಿದರು.
ಸಮೀಪದ ಕಣಗಾಲು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಂಬಾಕು ಸೇವೆನೆಯಿಂದ ಸಾವು ಉಂಟಾಗುತ್ತದೆ. ಉಸಿರಾಟದ ತೊಂದರೆ, ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳೂ ಬರುತ್ತವೆ. ಹಾಗಾಗಿ ತಂಬಾಕು ಸೇವನೆಯಿಂದ ದೂರವಿರಬೇಕು ಎಂದು ಹೇಳಿದರು.
ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವನಾಥ್ ಮಾತನಾಡಿದರು. ಸಿಬ್ಬಂದಿ ರಾಜೇಶ್ವರಿ, ಸಹನಾ, ಮಂಜುಳಾ ಇತರರು ಇದ್ದರು.