ತಜ್ಞ ವೈದ್ಯರ ನೇಮಕಕ್ಕೆ ಒತ್ತಾಯ

28kls2 manavi
ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಜ್ಞ ವೈದ್ಯರು ಮತ್ತು ಸಿಬ್ಬಂದಿ ನೇಮಕ ಮಾಡುವಂತೆ ಕಳಸ ತಹಸೀಲ್ದಾರ್‌ಗೆ ಡಾ. ರಾಜ್ ಕನ್ನಡ ಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಕನ್ನಡ ರಾಜು, ಚೌಡ ನಾಯ್ಕ, ಮಲ್ನಾಡ್ ಶರ್ೀ, ಸಂತೋಷ್, ಶ್ಯಾಮಚಾರ್ ಇತರರಿದ್ದರು.
Published on

ಕಳಸ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಜ್ಞ ವೈದ್ಯರು ಮತ್ತು ಸಿಬ್ಬಂದಿಯನ್ನು ತುರ್ತು ನೇಮಕ ಮಾಡುವಂತೆ ತಹಸೀಲ್ದಾರ್ ಅವರಿಗೆ ಡಾ. ರಾಜ್ ಕನ್ನಡ ಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಕಳಸದಲ್ಲಿ ಸುಸಜ್ಜಿತ ಸಮುದಾಯ ಆರೋಗ್ಯ ಕೇಂದ್ರವಿದ್ದು ಇದು ಸುತ್ತಮುತ್ತಲಿನ ಎಲ್ಲ ಹಳ್ಳಿಗಳಿಗೂ ಪ್ರಮುಖವಾದ ಆಸ್ಪತ್ರೆಯಾಗಿದೆ. ಈ ಭಾಗದಲ್ಲಿ ವಾಸ ಮಾಡುತ್ತಿರುವ ಬಡ ಕೃಷಿಕರು, ಕೂಲಿ ಕಾರ್ಮಿಕರು, ಸಣ್ಣ ರೈತಾಪಿ ವರ್ಗದವರು ಈ ಸಮುದಾಯ ಆರೋಗ್ಯ ಕೇಂದ್ರವನ್ನೇ ನಂಬಿಕೊಂಡಿದ್ದಾರೆ.

ಆದರೆ ಆಸ್ಪತ್ರೆಯಲ್ಲಿ ಒಂದು ತಿಂಗಳಿನಿಂದ ವೈದ್ಯರೇ ಇಲ್ಲ ಮತ್ತು ಸಿಬ್ಬಂದಿ ಕೊರತೆ ಸಹ ಇದೆ. ತುರ್ತಾಗಿ ಯಾರೇ ರೋಗಿಗಳು ಇಲ್ಲಿಗೆ ಬಂದರೂ ವೈದ್ಯರಿಲ್ಲದೆ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ. ಯಾವುದೇ ಅಪಘಾತ ಅಥವಾ ಇನ್ನಿತರ ಕಾರಣಗಳಿಂದ ಮೃತರಾದ ವ್ಯಕ್ತಿಯ ಮರಣೋತ್ತರ ಪರೀಕ್ಷೆ ಮಾಡಲು ಸಹ ಇಲ್ಲಿ ವೈದ್ಯರಿಲ್ಲ. ಹೀಗಾಗಿ ದೂರದ ಬಾಳೆಹೊನ್ನೂರು, ಕೊಪ್ಪ, ಮೂಡಿಗೆರೆ ಕಡೆಗೆ ಶವ ತೆಗೆದುಕೊಂಡು ಹೋಗಬೇಕಾಗಿದೆ. ವೈದ್ಯರ ಸಹಿ ಆಗಬೇಕಾದರೆ ಮೂಡಿಗೆರೆ, ಬಾಳೆಹೊನ್ನೂರು, ಕಾರ್ಕಳ, ಕೊಪ್ಪ ಮುಂತಾದ ಕಡೆಗಳಿಗೆ ಹೋಗಬೇಕಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಜ್ಞ ವೈದ್ಯರು ಮತ್ತು ಸಿಬ್ಬಂದಿಯನ್ನು ತುರ್ತು ನೇಮಕ ಮಾಡಿ ಇಲ್ಲವಾದಲ್ಲಿ ಮೇ 15ರಿಂದ ಸಮುದಾಯ ಆರೋಗ್ಯ ಕೇಂದ್ರ ಮುಂಭಾಗ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಡಾ. ರಾಜ್ ಕನ್ನಡ ಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಎಚ್ಚರಿಸಿದೆ.

ಡಾ. ರಾಜ್ ಕನ್ನಡ ಸಂಘದ ಅಧ್ಯಕ್ಷ ಕನ್ನಡ ರಾಜು, ಕರವೇ ಅಧ್ಯಕ್ಷ ಚೌಡ ನಾಯ್ಕ, ಗೌರವಾಧ್ಯಕ್ಷ ಮಲ್ನಾಡ್ ಶರ್ೀ, ಸಂತೋಷ್, ಶ್ಯಾಮಚಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net