ತನಿಖಾ ಸಂಸ್ಥೆಗಳು ಬಿಜೆಪಿ ಘಟಕಗಳಾಗಿ ಪರಿವರ್ತನೆ, ಕೈ ಸಿಡಿಮಿಡಿ

22-gdg-5
Published on

ವಿಜಯವಾಣಿ ಸುದ್ದಿಜಾಲ ಗದಗ

ತನಿಖಾ ಸಂಸ್ಥೆಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂ„ ಅವರಿಗೆ ವಿಚಾರಣೆ ಮೂಲಕ ಕೇಂದ್ರ ಸರ್ಕಾರ ಕಿರುಕುಳ ನೀಡುತ್ತದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಶುಕ್ರವಾರ ಪ್ರತಿಭಟನೆ ನಡೆಸಿತು.  

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಉಪವಿಭಾಗಾ„ಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ರ್ಯಾಲಿಯುದ್ದಕ್ಕೂ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಉಪವಿಭಾಗಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ ಮಾತನಾಡಿ, ಇಡಿ, ಐಟಿ, ಸಿಬಿಐ ದಂಡೇ ಬರಲಿ, ಬಿಜೆಪಿ ದಂಡೇ ಬರಲಿ. ಕಾಂಗ್ರೆಸ್ ನಿರ್ಧಾರ ಅಚಲ. ಪಕ್ಷದ ಕಾರ್ಯಕರ್ತರೆಲ್ಲರೂ ಸೋನಿಯಾ ಗಾಂ„ ಹಾಗೂ ರಾಹುಲ್ ಗಾಂ„ ಅವರ ಬೆನ್ನಿಗೆ ಇರುತ್ತಾರೆ. ಸುಳ್ಳು ಕೇಸ್ ಗಳನ್ನು ದಾಖಲಿಸಿ ನೀವೇನಾದ್ರೂ ಸೋನಿಯಾ ಗಾಂ„ ಹಾಗೂ ರಾಹುಲ್ ಗಾಂ„ ಅವರನ್ನು ಮುಟ್ಟಲು ಹೋದರೆ ಸರ್ವನಾಶವಾಗುತ್ತೀರಿ. ಪ್ರಧಾನಿ ಹುದ್ದೆಯನ್ನೇ ತ್ಯಜಿಸಿದ ಸೋನಿಯಾ ಗಾಂ„ ಹೀನ ಕೃತ್ಯಗಳಿಗೆ ಕೈಹಾಕಲು ಸಾಧ್ಯವಿಲ್ಲ. 8 ವರ್ಷಗಳ ಕಾಲ ಸುಳ್ಳು ಹೇಳಿ ಅ„ಕಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ರಾಜ್ಯವನ್ನು ರಾವಣ ರಾಜ್ಯವನ್ನಾಗಿ ಮಾಡಿದ್ದಾರೆ. ಉದ್ಯೋಗ ಸೃಷ್ಟಿಸುವಲ್ಲಿ ವಿಫಲರಾಗಿದ್ದಾರೆ ಎಂದು ಹರಿಹಾಯ್ದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಎಸ್.ಪಾಟೀಲ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಸೋನಿಯಾ ಗಾಂ„ ಹಾಗೂ ರಾಹುಲ್ ಗಾಂ„ ಅವರ ಸುಳ್ಳು ಆಪಾದನೆ ಹೊರಿಸಿ ಇಡಿ ತನಿಖೆ ಆರಂಭಿಸಿರುವುದು ಖಂಡನೀಯ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇವತ್ತು, ಮೊನ್ನೆ ಹುಟ್ಟಿದ್ದಲ್ಲ. ಸ್ವಾತಂತ್ರ್ಯ ಪೂರ್ವದಲ್ಲೇ ಇದ್ದು, ಭಾರತದಲ್ಲಿ ಬ್ರಿಟಿಷ್ ಆಳ್ವಿಕೆಯ ವಿರುದ್ಧ ಧ್ವನಿಯಾಗಿ ನ್ಯಾಷನಲ್ ಹೆರಾಲ್ಡ್ ಸುದ್ದಿ ಪತ್ರಿಕೆ ಆರಂಭವಾಗಿದ್ದು. ಇಲ್ಲಸಲ್ಲದ ಅರೋಪಗಳಿಂದ ಕಾಂಗ್ರೆಸ್ ಬಲವನ್ನು ಕುಂದಿಸಲು ಬಿಜೆಪಿ ಸರ್ಕಾರ ಶತಪ್ರಯತ್ನ ಮಾಡುತ್ತಿದೆ. ಆದರೆ, ಅದು ಎಂದಿಗೂ ಕೈಗೂಡುವುದಿಲ್ಲ ಎಂದು ಕುಟುಕಿದರು.

ಮಾಜಿ ಸಚಿವ ಬಿ.ಆರ್.ಯಾವಗಲ್, ಮಾಜಿ ಶಾಸಕ ಡಿ.ಆರ್.ಪಾಟೀಲ ಮಾತನಾಡಿ, ಕಳೆದ ಎಂಟು ವರ್ಷಗಳಿಂದ ಕೇಂದ್ರ ಸರ್ಕಾರ ಅತ್ಯಂತ ಕೆಟ್ಟ ಆಡಳಿತ ನೀಡಿದೆ. ದೇಶದಲ್ಲಿ ಆತಂಕಕಾರಿ ಪರಿಸ್ಥಿತಿ ಎದುರಾಗಿದೆ. ಮೋದಿ ಸರ್ಕಾರದ ವಿರುದ್ಧ ಮಾತನಾಡಿದರೆ, ಲೋಪಗಳನ್ನು ಎತ್ತಿಹಿಡಿದರೆ ತನಿಖಾ ಸಂಸ್ಥೆಗಳ ಮೂಲಕ ತನಿಖೆ ಆರಂಭಿಸಿ ಅವರನ್ನು ಕುಗ್ಗಿಸುವ ಕೆಲಸ ಮಾಡಲಾಗುತ್ತಿದೆ. ಜನರ ಮನಸ್ಸಿನ ಆಳದಲ್ಲಿರುವ ಕಾಂಗ್ರೆಸ್ ಪಕ್ಷವನ್ನು ಮಟ್ಟಹಾಕಲು ಸಾಧ್ಯವಿಲ್ಲ. ಬಿಜೆಪಿ ಅವನತಿ ಆರಂಭವಾಗಿದೆ ಎಂದು ಭವಿಷ್ಯ ನುಡಿದರು.

ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳ ಹಕ್ಕನ್ನು ಅಡಗಿಸುವ ನಿಟ್ಟಿನಲ್ಲಿ ಇಡಿ, ಐಟಿ ಹಾಗೂ ಸಿಬಿಐ ನಿಂದ  ತೊಂದರೆ ಉಂಟು ಮಾಡುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಮುಖಂಡರಾದ ಟಿ. ಈಶ್ವರ, ಎಚ್.ಎಸ್. ಸೋಂಪೂರ ಮತನಾಡಿದರು.ಪ್ರತಿಭಟನೆಯಲ್ಲಿ ಕೃಷ್ಣಗೌಡ ಪಾಟೀಲ, ಮಿಥುನ್ ಪಾಟೀಲ, ಉಮರ್ ಫಾರೂಕ್ ಹುಬ್ಬಳ್ಳಿ, ನಗರಸಭೆ ಸದಸ್ಯರಾದ ಸುರೇಶ ಕಟ್ಟಿಮನಿ, ಶಕುಂತಲಾ ಅಕ್ಕಿ, ಪರವೀನಬಾಬು ಮುಲ್ಲಾ, ಲಕ್ಷ್ಮಿ ಸಿದ್ದಮ್ಮನಹಳ್ಳಿ, ನಗರಸಭೆ ಮಾಜಿ ಅಧ್ಯಕ್ಷ ಬಿ.ಬಿ.ಅಸೂಟಿ, ಅಶೋಕ ಮಂದಾಲಿ, ವಿ.ಬಿ. ಸೋಮನಕಟ್ಟಿಮನಠ, ಬಸವರಾಜ ಕಡೇಮನಿ, ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಸುಜಾತಾ ದೊಡ್ಡಮನಿ, ವಿ.ಆರ್. ಗುಡಿಸಾಗರ, ಮೋಹನ ದೊಡ್ಡಕುಂಡಿ, ಮೀನಾಕ್ಷಿ ಬೆನಕಣ್ಣವರ ಸೇರಿ ಮತ್ತಿತರರು ಇದ್ದರು.ಕಾರ್ಯಕ್ರಮದ ನಂತರ ಅಪರ ಜಿಲ್ಲಾ„ಕಾರಿ ಅನ್ನಪೂರ್ಣ ಮುದಕಮ್ಮನವರ ಅವರಿಗೆ ಮನವಿ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net