ತರಬೇತಿ ಕೇಂದ್ರದ ಸದುಪಯೋಗ ಪಡೆಯಿರಿ

05 KRN-1 (1)
Published on

ಕೆ.ಆರ್.ನಗರ: ಸ್ಪರ್ಧಾತ್ಮಕ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಪಟ್ಟಣದ ಕೇಂದ್ರ ಗ್ರಂಥಾಲಯದಲ್ಲಿ ತರಬೇತಿ ಕೇಂದ್ರ ತೆರೆಯಲಾಗಿದ್ದು, ಯುವ ಜನಾಂಗ ಇದರ ಅನುಕೂಲ ಪಡೆದುಕೊಳ್ಳಬೇಕು ಎಂದು ಪುರಸಭಾ ಮುಖ್ಯಾಧಿ ಕಾರಿ ಡಾ.ಜಯಣ್ಣ ಹೇಳಿದರು.


ಪಟ್ಟಣದ ತಾಲೂಕು ಪತ್ರಕರ್ತರ ಸಂಘದ ಭವನದ ಹಿಂದಿರುವ ಸಾರ್ವಜನಿಕ ಗ್ರಂಥಾಲಯದ ಆವರಣದಲ್ಲಿ ಶುಕ್ರವಾರ ಪುರಸಭಾ ಅಧ್ಯಕ್ಷರೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಪುಸ್ತಕ, ಪತ್ರಿಕೆಗಳನ್ನು ಓದುವ ಹವ್ಯಾಸ ಕಡಿಮೆ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಿಗೆ ಮಾರುಹೋಗಿ ಉತ್ತಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.


ಇದೇ ವೇಳೆ ಗ್ರಂಥಾಲಯ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಪುರಸಭಾ ಅಧ್ಯಕ್ಷ ಸೈಯದ್ ಸಿದ್ದೀಕ್, ಆರೋಗ್ಯ ನಿರೀಕ್ಷಕ ರಾಜೇಂದ್ರ, ಲೋಕೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net