

ಹನೂರು: ಸ್ಮಶಾನ ಜಾಗ ಮಂಜೂರು ಮಾಡಿಕೊಂಡುವಂತೆ ಪಟ್ಟಣದ ಪೌರ ಕಾರ್ಮಿಕರು ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್ ಅವರಲ್ಲಿ ಮನವಿ ಸಲ್ಲಿಸಿದರು.
ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮನವಿ ಸಲ್ಲಿಸಿದ ವೇಳೆ ಪೌರ ಕಾರ್ಮಿಕರ ಮುಖ್ಯಸ್ಥೆ ಕುಳ್ಳಮ್ಮ ಮಾತನಾಡಿ, ಪಟ್ಟಣದಲ್ಲಿ 30 ಪೌರ ಕಾರ್ಮಿಕ ಕುಟುಂಬಗಳು, ಹಲವು ವರ್ಷಗಳಿಂದಲೂ ವಾಸಿಸುತ್ತಿದ್ದೇವೆ. ಪಟ್ಟಣದ ಸ್ವಚ್ಛತೆಗಾಗಿ ನಿತ್ಯವೂ ಶ್ರಮಿಸಲಾಗುತ್ತಿದೆ. ಆದರೆ, ಶವ ಸಂಸ್ಕಾರ ನೆರವೇರಿಸಲು ಸ್ಮಶಾನವಿಲ್ಲ. ಇದರಿಂದ ತಟ್ಟೆಹಳ್ಳದ ಬಳಿ ಶವ ಸಂಸ್ಕಾರವನ್ನು ನೆರವೇರಿಸಲಾಗುತ್ತಿದೆ. ಇದರಿಂದ ಮಳೆಗಾಲದ ವೇಳೆ ತುಂಬಾ ತೊಂದರೆ ಅನುಭವಿಸುತ್ತಿದ್ದೇವೆ. ಜತೆಗೆ ಇದೀಗ ತಟ್ಟೆಹಳ್ಳದಲ್ಲಿ ಸೇತುವೆ ನಿರ್ಮಾಣವಾಗಿರುವುದರಿಂದ ಅಂತ್ಯ ಸಂಸ್ಕಾರ ನೆರವೇರಿಸಲು ಸಾಧ್ಯವಿಲ್ಲ. ಆದ್ದರಿಂದ ಈ ಬಗ್ಗೆ ಮುತುರ್ವಜಿ ವಹಿಸಿ ಸ್ಮಶಾನ ಜಾಗ ಮಂಜೂರು ಮಾಡಿಕೊಡುವಂತೆ ಮನವಿ ಮಾಡಿದರು. ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್ ಪ್ರತಿಕ್ರಿಯಿಸಿ ಪಟ್ಟಣ ವ್ಯಾಪ್ತಿಯಲ್ಲಿ ಸರ್ವೆ ಕಾರ್ಯ ನಡೆಸಿ ಜಾಗ ಗುರುತಿಸಿ ಸ್ಮಶಾನ ಜಾಗ ಮಂಜೂರು ಮಾಡಿ ವರದಿ ಸಲ್ಲಿಸುವಂತೆ ತಹಸೀಲ್ದಾರ್ ವೈ.ಕೆ ಗುರುಪ್ರಸಾದ್ ಅವರಿಗೆ ಸೂಚಿಸಿದರು.
ಪೌರ ಕಾರ್ಮಿಕರಾದ ರುಕ್ಮಿಣಿ, ರಾಮಿ, ಆಶಾ, ಶಿವರಾಜು, ಗಣೇಶ್, ಮುರಳಿ ಇತರರು ಇದ್ದರು.