ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ / ಯೋಜನೆಯಿಂದ ವಂಚಿತರಾಗದAತೆ ನೋಡಿಕೊಳ್ಳಿ / ಶಾಸಕ ಕೊತ್ತೂರು ಮಂಜುನಾಥ್

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಅವುಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲರೂ ಶ್ರಮಿಸಬೇಕು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಬುಧವಾರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ಹಾಗೂ ನೂತನ ಅಧ್ಯಕ್ಷ ವಿ.ಎಂ ಮುನಿಯಪ್ಪ, ಮತ್ತು ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರ ಕಳೆದ ವರ್ಷ ಜಾರಿಗೊಳಿಸಿದ ಐದು ಯೋಜನೆಗಳು ನಿರಂತರವಾಗಿ ಮುಂದುವರಿದಿವೆ. ರಾಜ್ಯಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಸಮಿತಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿ ರಚಿಸುವ ಮೂಲಕ ಯೋಜನೆ ಕ್ರಮಬದ್ಧವಾಗಿ ಜಾರಿಗೊಳ್ಳಲು ಸರ್ಕಾರ ಯತ್ನಿಸಿದೆ. ಯಾವುದೇ ಕಾರಣಕ್ಕೂ ಅರ್ಹರು ಯೋಜನೆಯಿಂದ ವಂಚಿತರಾಗಬಾರದು ಎನ್ನುವ ಧ್ಯೇಯಕ್ಕೆ ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳು ಸಮಿತಿ ಸದಸ್ಯರು ಸಾರ್ವಜನಿಕರಿಗೆ ನ್ಯಾಯ ದೊರಕಿಸುವಲ್ಲಿ ಪ್ರಮಾಣಿಕ ಕೆಲಸ ಮಾಡಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳು ಜನರಿಗೆ ಶಕ್ತಿಯನ್ನು ತುಂಬಿಸುತ್ತಿವೆ. ನಮ್ಮ ಸರ್ಕಾರ ನುಡಿದಂತೆ ನಡೆದ ಸರ್ಕಾರವಾಗಿದೆ. ಮೊಟ್ಟ ಮೊದಲ ಕ್ಯಾಬಿನೆಟ್‌ನಲ್ಲಿಯೇ ಜನರಿಗೆ ಆಶ್ವಾಸನೆ ನೀಡಿದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ನಮ್ಮ ಪಕ್ಷವು ಯಾವುದೇ ಜಾತಿ ಧರ್ಮ ಬೇದವಿಲ್ಲದೆ ಎಲ್ಲಾ ವರ್ಗದವರಿಗೆ ಅವಕಾಶಗಳನ್ನು ಕಲ್ಲಿಸುತ್ತಿದ್ದೇವೆ ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ತಹಶಿಲ್ದಾರ್ ನಯನ, ಜಿಪಂ ಉಪ ಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಹಿರಿಯ ದಲಿತ ಮುಖಂಡ ಸಿ.ಎಂ ಮುನಿಯಪ್ಪ, ತಾಪಂ ಇಒ ಮಂಜುನಾಥ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೋಚಿಮುಲ್ ನಿರ್ದೇಶಕ ಷಂಷೀರ್, ಮಾಜಿ ನಿರ್ದೇಶಕ ಛತ್ರಕೋಡಿಹಳ್ಳಿ ರಾಮಕೃಷ್ಣೇಗೌಡ, ಕೆಡಿಪಿ ಸದಸ್ಯ ಮಣಿಘಟ್ಟ ಸೊಣ್ಣೇಗೌಡ, ನಗರಸಭೆ ಸದಸ್ಯರಾದ ಅಂಬರೀಷ್, ಮಂಜುನಾಥ್, ಮುಖಂಡರಾದ ಗಂಗಣ್ಣ ಮೈಲಾಂಡಹಳ್ಳಿ ಮುರಳಿ, ಮುನಿಆಂಜಿನಪ್ಪ, ವಿ.ನಾಗರಾಜ್, ಬೆಳಗಾನಹಳ್ಳಿ ಮುನಿವೆಂಕಟಪ್ಪ, ಛತ್ರಕೋಡಿಹಳ್ಳಿ ಮಂಜುನಾಥ್, ಸೇರಿದಂತೆ ಸಮಿತಿ ಸದಸ್ಯರು ಮುಂತಾದವರು ಇದ್ದರು.

ಚಿತ್ರ ೦೯ ಕೆ.ಎಲ್.ಆರ್. ೦೧ : ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಕಛೇರಿ ಉದ್ಘಾಟನೆ ಹಾಗೂ ತಾಲ್ಲೂಕು ಅಧ್ಯಕ್ಷರು ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಶಾಸಕ ಕೊತ್ತೂರು ಮಂಜುನಾಥ್, ಎಂಎಲ್‌ಸಿ ಅನಿಲ್ ಕುಮಾರ್ ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net