ತಾಲ್ಲೂಕು ಸಂಯೋಜಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

application
Published on

ಕೇಂದ್ರ ಸರ್ಕಾರದ ರಾಷ್ಟ್ರೀಯ ಘೋಷಣ್ ಅಭಿಯಾದ ಯೋಜನೆಯ ಅನುಷ್ಠಾನ ಮಾರ್ಗಸೂಚಿಯನ್ವಯ ತಾಲ್ಲೂಕು ಮಟ್ಟದಲ್ಲಿ 03 ತಾಲ್ಲೂಕು ಸಂಯೋಜಕರ ಹುದ್ದೆಯನ್ನು ತಾತ್ಕಾಲಿಕ ಗೌರವಧನ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತಾಲ್ಲೂಕು ಸಂಯೋಜಕರ ಹುದ್ದೆಗೆ ಬಿಳಿಗೆರೆ ತಾಲ್ಲೂಕಿನಲ್ಲಿ 01, ಮೈಸೂರು ನಗರ ತಾಲ್ಲೂಕಿನಲ್ಲಿ 01, ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ 01, ಹುದ್ದೆಗಳು ಖಾಲಿ ಇದ್ದು, ವಿದ್ಯಾರ್ಹತೆಯನ್ನು ಹೊಂದಿರಬೇಕು, ತಂತ್ರಜ್ಞಾನ ಮತ್ತು ಸಾಫ್ಟ್ವೇರ್ ಅಪ್ಲಿಕೇಶನ್ ಬೆಂಬಲದೊOದಿಗೆ ಕನಿಷ್ಠ 2 ವರ್ಷ ಅನುಭವವನ್ನು ಹೊಂದಿರಬೇಕು. ಸ್ಥಳೀಯ ಭಾಷೆಯಲ್ಲಿ ಉತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಹೊಂದಿರಬೇಕು, ಕಡ್ಡಾಯವಾಗಿ ಸ್ಥಳೀಯ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. Rs. 20,000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

ನಿಗಧಿತ ನಮೂನೆಯಲ್ಲಿ ಅರ್ಜಿ, ಎಸ್.ಎಸ್.ಎಲ್.ಸಿ ಅಂಕ ಪಟ್ಟಿ, ಹುದ್ದೆಗೆ ನಿಗಧಿಪಡಿಸಿದ ಹಾಗೂ ವಿದ್ಯಾರ್ಹತೆಯ ಅಂಕಪಟ್ಟಿಗಳು, ಅನುಭವ ಪ್ರಮಾಣ ಪತ್ರ, ಭರ್ತಿ ಮಾಡಿದ ಅರ್ಜಿಗಳನ್ನು ಸಂಬoದಿಸಿದ ದಾಖಲೆಗಳೊಂದಿಗೆ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ತ್ರೀ ಶಕ್ತಿ ಭವನ, ಕೃಷ್ಣದೇವರಾಯ ಸರ್ಕಲ್, ವಿಜಯನಗರ 2ನೇ ಹಂತ, ಮೈಸೂರು ಇವರಿಗೆ ಜೂನ್ 10 ರೊಳಗೆ ಸಲ್ಲಿಸಬೇಕಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿ ದೂ.ಸಂ:0821-2495432 ನ್ನು ಸಂಪರ್ಕಿಸಬಹುದು ಎಂದು ಮೈಸೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net