ತಿ.ನರಸೀಪುರದಲ್ಲಿ ಕನ್ನಡ ರಾಜ್ಯೋತ್ಸವ ನಾಳೆ

Published on

ತಿ.ನರಸೀಪುರ: ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ನ.1ರ ರಂದು 69ನೇ ಕನ್ನಡ ರಾಜ್ಯೋತ್ಸವ ಆಯೋಜಿಸಲಾಗಿದೆ.

ತಾಲೂಕು ಕಚೇರಿ ಆವರಣದಲ್ಲಿ ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ, 10 ಗಂಟೆಗೆ ವಿದ್ಯೋದಯ ಕಾಲೇಜು ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ , ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹದೇವಪ್ಪ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಸದ ಸುನೀಲ್ ಬೋಸ್, ವಿಧಾನ ಪರಿಷತ್ ಸದಸ್ಯರಾದ ಎಚ್. ವಿಶ್ವನಾಥ್, ಡಾ.ಡಿ.ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು.ಜಿ ಮಾದೇಗೌಡ, ಡಾ. ಯತೀಂದ್ರ ಸಿದ್ದರಾಮಯ್ಯ, ವಿವೇಕಾನಂದ, ತಾ.ಪಂ. ಆಡಳಿತಾಧಿಕಾರಿ ಕೆ.ಬಿ. ಪ್ರಭುಸ್ವಾಮಿ, ಪುರಸಭೆ ಅಧ್ಯಕ್ಷ ಬಿ. ವಸಂತ ಶ್ರೀಕಂಠ, ಬನ್ನೂರು ಕೃಷ್ಣಗೌಡ, ಉಪಾಧ್ಯಕ್ಷ ರಾಜೇಶ್ವರಿ ರಾಘವೇಂದ್ರ, ನಾಗರತ್ನ ಪ್ರಭಾಕರ್ ಭಾಗವಹಿಸಲಿದ್ದು, ಮುಖ್ಯ ಭಾಷಣಕಾರರಾಗಿ ವ್ಯಾಸರಾಜಪುರ ಸರ್ಕಾರಿ ಪ್ರೌಢಶಾಲೆಯ ಕನ್ನಡ ಶಿಕ್ಷಕ ಬಿ.ಆರ್.ರಂಗಸ್ವಾಮಿ ನಾಡು ನುಡಿಯ ಹಿರಿಮೆಯನ್ನು ತಿಳಿಸುವರು.

ನಾಡು, ನುಡಿಗಾಗಿ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಹಾಗೂ ವಿವಿಧ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಾಲೂಕಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಾಡಹಬ್ಬವನ್ನು ಯಶಸ್ವಿಗೊಳಿಸಬೇಕೆಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ತಹಸೀಲ್ದಾರ್ ಟಿ.ಜಿ.ಸುರೇಶಾಚಾರ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕನ್ನಡ ಪುಟ್ಟಸ್ವಾಮಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net