ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವು

ಫೋಟೋ ಶೀರ್ಷಿಕೆ 23ಸಿಆರ್_ಪಿ-3ಎ
Published on

ಚನ್ನರಾಯಪಟ್ಟಣ: ಹೋಬಳಿಯ ಬಿ.ಚೋಳೇನಹಳ್ಳಿ ಗ್ರಾಮದಲ್ಲಿ ತೆಂಗಿನಕಾಯಿ ಗೊನೆ ಬಿದ್ದು ಗುರುವಾರ ಬಾಲಕನೊಬ್ಬ ಮೃತಪಟ್ಟಿದ್ದಾನೆ.
ಪ್ರಜ್ವಲ್(16) ಮೃತಪಟ್ಟ ಬಾಲಕ. ಬುಧವಾರ ಸುರಿದ ಭಾರಿ ಮಳೆಗೆ ಬಿದ್ದಿದ್ದ ಕಾಯಿಗಳನ್ನು ಒಂದೆಡೆ ಸಂಗ್ರಹಿಸುವಾಗ ಏಕಾಏಕಿ ಮರದಿಂದ ತೆಂಗಿನಕಾಯಿ ಗೊನೆ ಬಾಲಕನ ಮೇಲೆ ಬಿದ್ದಿದೆ. ತೀವ್ರವಾಗಿ ಪೆಟ್ಟಾಗಿದ್ದ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾನೆ.
ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಉತ್ತೇನಹಳ್ಳಿ ಗ್ರಾಮದ ರವಿ ಮತ್ತು ಅನಸೂಯಾ ದಂಪತಿ ಪುತ್ರ ಪ್ರಜ್ವಲ್ನೊಂದಿಗೆ ಬಿ.ಚೋಳೇನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ವಾಸವಾಗಿದ್ದರು. ಪ್ರಜ್ವಲ್ ಪ್ರತಿನಿತ್ಯ ತೋಟಕ್ಕೆ ಹೋಗಿ ಕಾಯಿ ಎತ್ತಿ ಹಾಕಿ ಇತರ ಸಣ್ಣಪುಟ್ಟ ಕೆಲಸ ಮುಗಿಸಿ ಕಾಲೇಜಿಗೆ ಹೋಗುತ್ತಿದ್ದ. ಭಾರಿ ಮಳೆ, ಗಾಳಿಯಿಂದ ಮರದಿಂದ ತೆಂಗಿನಕಾಯಿಗಳು ನೆಲಕ್ಕೆ ಬಿದ್ದಿದ್ದವು. ತೆಂಗಿನಕಾಯಿಗಳನ್ನು ಒಂದೆಡೆ ಸಂಗ್ರಹಿಸುತ್ತಿದ್ದ ವೇಳೆ ಮರದಿಂದ ಬಾಲಕನ ಮೇಲೆ ತೆಂಗಿನಕಾಯಿ ಗೊನೆಗಳು ಬಿದ್ದಿದೆ.
ಪ್ರಜ್ವಲ್ ಶ್ರವಣಬೆಳಗೊಳದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net