ದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿರುವುದನ್ನು ಖಂಡಿಸಿ ಆ.29 ರಂದು ಪ್ರತಿಭಟನಾ ಮೆರವಣಿಗೆ

Rajanna_Minister
Published on

ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿರುವುದನ್ನು ಖಂಡಿಸಿ ಆ.29 ರಂದು ನಗರದಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಎಂ.ರಾಮಚಂದ್ರ ತಿಳಿಸಿದರು.

ರಾಜ್ಯದ ಶೋಷಿತ ಸಮುದಾಯವಾದ ನಾಯಕ ಸಮುದಾಯವನ್ನು ದಮನ ಮಾಡಲು ಹುನ್ನಾರ ನಡೆದಿದೆ. ಇದೇ ರೀತಿ ನಾಗೇಂದ್ರ ಅವರಿಗೆ ಅನ್ಯಾಯ ಮಾಡಲಾಯಿತು. ಈಗ ಯಾವುದೇ ನೋಟಿಸ್ ನೀಡದೆ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಅಂದು ಬೆಳಗ್ಗೆ 10ಕ್ಕೆ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿ ತಲುಪಿ, ರಾಜಣ್ಣ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಹೇಳಿದರು.

ಸೆ.2ರಂದು ಚಾಮರಾಜನಗರದಲ್ಲಿಯೂ ಇದೇ ರೀತಿಯ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಸಮುದಾಯದ ಎಲ್ಲ ಸದಸ್ಯರು ಈ ಎರಡೂ ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಪದಾಧಿಕಾರಿಗಳು ಹಾಗೂ ಮುಖಂಡರಾದ ಮಹದೇವನಾಯಕ, ಆರ್.ರಾಚಪ್ಪ, ಕೆಂಪನಾಯಕ, ಶ್ರೀನಿವಾಸ ನಾಯಕ, ದ್ಯಾವಪ್ಪ ನಾಯಕ, ಅಣ್ಣಯ್ಯ ನಾಯಕ, ಮಹದೇವಸ್ವಾಮಿ ಹಾಗೂ ಪ್ರಭಾಕರ್ ಹುಣಸೂರು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net