

ತಾಲೂಕಿನ ಜಯಪುರ ಹೋಬಳಿಯ ಗುಜ್ಜೇಗೌಡನ ಪುರದ ಬಳಿ ನಡೆದ ಕೇರಳದ ವ್ಯಾಪಾರಿಯ ದರೋಡೆ ಪ್ರಕರಣದ ಸಂಬಂಧ ಮೈಸೂರು ಜಿಲ್ಲಾ ಪೊಲೀಸರು ತನಿಖೆ ಚುರುಕುಗೊಳಿಸಿದ್ದು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಕೇರಳದ ಕಣ್ಣನ್ ಬಂಧಿತ. ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈತನನ್ನು ಡಕಾಯಿತರಿಗೆ ನೆರವು ನೀಡಿದ ಆರೋಪದ ಮೇರೆಗೆ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಕೇರಳ ಮೂಲದ ಈತ ಡಕಾಯಿತರಿಗೆ ಕಾರನ್ನು ಬಾಡಿಗೆ ಪಡೆಯಲು ನೆರವಾಗಿದ್ದು, ಡಕಾಯಿತಿಗೆ ಸಹಕರಿಸಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಇದೇ ವೇಳೆ ಮತ್ತೋಬ್ಬ ಶಂಕಿನನನ್ನು ವಶಕ್ಕೆ ಪಡೆಯಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.