

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನೆಗೆ ಈ ಬಾರಿ ಕಟ್ಟಡ ಕಾರ್ಮಿಕರನ್ನು ಆಯ್ಕೆ ಮಾಡಿ ಎಂದು ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಅಧ್ಯಕ್ಷ ರಾಚಪ್ಪ ಹೇಳಿದರು.
ರಾಜ್ಯ ಸರ್ಕಾರವೂ ದಸರಾ ಉದ್ಘಾಟನೆಗೆ ಪ್ರತಿ ವರ್ಷವೂ ವಿವಿಧ ಕ್ಷೇತ್ರದ ಸಾಧಕರನ್ನು ಆಯ್ಕೆ ಮಾಡುತ್ತದೆ. ಅದರಂತೆ ಈ ಬಾರಿಯ ದಸರಾ ಉದ್ಘಾಟನೆಗೆ ಕಟ್ಟಡ ಕಾರ್ಮಿಕರನ್ನು ಆಯ್ಕೆ ಮಾಡಬೇಕು. ಅರಮನೆಯಿಂದ ಮೈಸೂರಿನ ಎಲ್ಲಾ ಪಾರಂಪರಿಕ ಕಟ್ಟಡಗಳ ನಿರ್ಮಾಣಕ್ಕೆ ಸಾಕಷ್ಟು ಶ್ರಮಿಸಿದ್ದಾರೆ. ಕೆಆರ್‌ಎಸ್ ಸೇರಿದಂತೆ ರಾಜ್ಯ ಬಹುತೇಕ ಕಟ್ಟಡಗಳಿಗೂ ಕಾರ್ಮಿಕರ ಬೆವರಿನ ಹನಿ ಇದ್ದು, ಈ ಹಿನ್ನೆಲೆಯಲ್ಲಿ ದಸರಾ ಉದ್ಘಾಟನೆಗೆ ಕಟ್ಟಡ ಕಾರ್ಮಿಕರನ್ನು ಆಯ್ಕೆ ಮಾಡಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬೆಳ್ಳಿಯಪ್ಪ, ಗೋಪಿ ಉಪಸ್ಥಿತರಿದ್ದರು.