ದೀನ ದಲಿತರನ್ನು ಮುಖ್ಯವಾಹಿನಿಗೆ ತಂದ ಮಹಾನ್ ವ್ಯಕ್ತಿ

20.tnp01
Published on
  • ತಿ.ನರಸೀಪುರ: ಮುಖ್ಯಮಂತ್ರಿಯಾಗಿದ್ದಾಗ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಹಿಂದುಳಿದ, ಶೋಷಿತ ಹಾಗೂ ದೀನದಲಿತರನ್ನು ಸಮಾಜದ ಮುಖ್ಯವಾಹಿನಿಗೆ ಬರುವಂತೆ ಮಾಡಿದ ಮಹಾನ್ ವ್ಯಕ್ತಿ ಡಿ.ದೇವರಾಜ ಅರಸು ಎಂದು ತಹಸೀಲ್ದಾರ್ ಟಿ.ಜಿ.ಸುರೇಶ್ ಆಚಾರ್ ಹೇಳಿದರು.
    ತಾಲೂಕು ಆಡಳಿತ, ತಾಲೂಕು ಪಂಚಾಯತಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ 108ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
    ಸರಳ ಸಜ್ಜನಿಕೆಯ ರಾಜಕಾರಣಿ, ಮುತ್ಸದ್ದಿ ದಿವಂಗತ ಡಿ.ದೇವರಾಜ ಅರಸು ಅವರ ಜೀವನ ಶೈಲಿ ಪ್ರತಿಯೊಬ್ಬರಿಗೂ ಮಾರ್ಗದರ್ಶನವಾಗಬೇಕು. ಹಿಂದುಳಿದ ವರ್ಗಗಳ ಇಲಾಖೆ ಹುಟ್ಟುಹಾಕುವ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಒದಗಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.
    ಸಮಾಜದಲ್ಲಿದ್ದ ಅನಿಷ್ಟ ಪದ್ಧತಿಗಳನ್ನು ತೊಲಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಹೋರಾಟ ನಡೆಸಿದ ಅವರು, ಜೀತ ಪದ್ಧತಿ, ಮಲ ಹೊರುವ ಪದ್ಧತಿ ನಿಷೇಧ ಮಾಡುವುದರ ಜತೆಗೆ 20 ಅಂಶಗಳ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದು ರಾಜ್ಯವನ್ನು ದೇಶದಲ್ಲಿಯೇ ಮಾದರಿ ಮಾಡಿದ್ದರು ಎಂದು ತಿಳಿಸಿದರು.
    ವಿದ್ಯೋದಯ ಕಾಲೇಜಿನ ಉಪನ್ಯಾಸಕ ಮೂಗೂರು ಕುಮಾರಸ್ವಾಮಿ ಮಾತನಾಡಿ, ದೇವರಾಜ ಅರಸು ಅವರು ಬಡವರು, ಶೋಷಿತರನ್ನು ಮುಖ್ಯವಾಹಿನಿಗೆ ತಂದು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಸದೃಢಗೊಳಿಸುವ ಮೂಲಕ ಹಿಂದುಳಿದ, ದಲಿತ ಹಾಗೂ ಬಡವರ ಮನಸ್ಸಿನಲ್ಲಿ ಎಂದೆಂದಿಗೂ ಚಿರಸ್ಥಾಯಿಯಾಗಿದ್ದಾರೆ. ಅಸಾಧ್ಯವಾದ ಸಾಧನೆಗಳನ್ನು ಮೌನವಾಗಿ ಮಾಡಿ ತೋರಿಸಿದ ಮೌನಕ್ರಾಂತಿಯ ಹರಿಕಾರ ಅವರಾಗಿದ್ದಾರೆ ಎಂದು ಹೇಳಿದರು.
    ಹಿಂದುಳಿದ ವರ್ಗಗಳ ಜನರಿಗೆ ಏನಾದರೂ ಮಾಡಬೇಕುಎಂದು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net