ದೀಪಾವಳಿ ಹಬ್ಬ ಆಚರಣೆ

18 KKP 1 (4)
Published on

ಮೈಸೂರು: ಚಾಮುಂಡಿಪುರಂನ ಶ್ರೀರಾಮ ಗೆಳೆಯರ ಬಳಗದ ವತಿಯಿಂದ ವಾರ್ಡ್ ನಂ. 55ರ ತಗಡೂರು ರಾಮಚಂದ್ರ ರಾವ್ ಉದ್ಯಾನವನದಲ್ಲಿ, ಪೌರಕಾರ್ಮಿಕರಿಗೆ ದೀಪಗಳನ್ನು ವಿತರಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು.

ಬಳಗದ ಅಧ್ಯಕ್ಷ ಸಿ.ಸಂದೀಪ್ ಮಾತನಾಡಿ, ಯಾವ ಹಬ್ಬವಿದ್ದರೂ ಕೂಡ ನಮ್ಮ ಪೌರಕಾರ್ಮಿಕರು ಮೊದಲು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಾರೆ. ಅವರು ನಗರವನ್ನು ಸ್ವಚ್ಛಗೊಳಿಸಿ, ಹಬ್ಬದ ವಾತಾವರಣ ಸೃಷ್ಟಿಸಿದ ನಂತರವೇ ತಮ್ಮ ಮನೆಯಲ್ಲಿ ಹಬ್ಬ ಆಚರಿಸುತ್ತಾರೆ. ಅವರು ತಮ್ಮ ಕೆಲಸದಲ್ಲಿಯೇ ದೇವರನ್ನು ಕಾಣುತ್ತಾರೆ. ಇಂತಹ ನಿಸ್ವಾರ್ಥ ಸೇವಕರೊಂದಿಗೆ ದೀಪಾವಳಿ ಹಬ್ಬ ಆಚರಣೆ ಮಾಡಿದ್ದು ನಮಗೆ ಸಂತಸ ತಂದಿದೆ ಎಂದು ತಿಳಿಸಿದರು. ಶ್ರೀರಾಮ ಗೆಳೆಯರ ಬಳಗದ ಸದಸ್ಯರಾದ ಭಾನುಕುಮಾರ್, ಮಧುಸೂಧನ್, ಪಾರ್ವತಿ, ಸುರೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net