ದುಷ್ಕರ್ಮಿಗಳ ವಿರುದ್ಧ ಕ್ರಮ ವಹಿಸಿ

Protest
Published on

ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕ ಮಹದೇವ ಹುಕ್ಕೇರಿ ಮೇಲೆ ಹಲ್ಲೆ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಕ್ರಮಕೈಗೊಳ್ಳಲು ಒತ್ತಾಯಿಸಿ, ಸಾಮಾಜಿಕ ಕಾರ್ಯಕರ್ತ ಸಿಂಧುವಳ್ಳಿ ಅಕ್ಬರ್ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಮೌನ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಅವರು, ಬೆಳಗಾವಿ ನಮ್ಮ ರಾಜ್ಯದ ಅಂಗ. ಕನ್ನಡವೇ ಸಾರ್ವಭೌಮ ಭಾಷೆ. ಆದರೆ, ಮರಾಠಿ ಭಾಷೆಯ ಸಂಘಟನೆಗಳು ರಾಜ್ಯದ ಬಸ್‌ಗಳಿಗೆ ಕಪ್ಪು ಮಸಿ ಬಳಿದು, ಕರ್ತವ್ಯನಿರತ ಕಂಡಕ್ಟರ್ ಮೇಲೆ ಪುಂಡಾಟಿಕೆ ಮೆರೆದು ಮಾರಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ ಎಂದರು.

ತಕ್ಷಣ ದುಷ್ಕರ್ಮಿಗಳ ಮೇಲೆ ಕ್ರಮ ಕೈಗೊಳ್ಳಬೇಕಾದ ಪೊಲೀಸರು ಕಂಡಕ್ಟರ್ ವಿರುದ್ಧವೇ ಪೋಕ್ಸೋ ಕೇಸ್ ದಾಖಲು ಮಾಡಿದ್ದಾರೆ. ಇದು ದುಷ್ಕರ್ಮಿಗಳಿಗೆ ಇನ್ನಷ್ಟು ಅಪರಾಧಕ್ಕೆ ದಾರಿ ಮಾಡಲಿದೆ. ಪೊಲೀಸರು ಹಲ್ಲೆಗೊಳಗಾದ ನಿರ್ವಾಹಕರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅಕ್ಬರ್ ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net