ದೇವರಾಜ ಅರಸು ರಾಜ್ಯ ಕಂಡ‌ ಧೀಮಂತ ರಾಜಕಾರಣಿ: ಸಚಿವ ಸತೀಶ್ ಜಾರಕಿಹೊಳಿ

arasu
Published on

ಬೆಳಗಾವಿ: ದಿವಂಗತ ಡಿ.ದೇವರಾಜ ಅರಸು ಅವರು ನಾಡಿನ ಹಿಂದುಳಿದ ವರ್ಗಗಳ ಏಳಿಗೆಗಾಗಿ ಸ್ಥಾಪಿಸಿದ ಹಿಂದುಳಿದ ವರ್ಗಗಳ ಆಯೋಗದ ಪ್ರತಿಫಲದಿಂದ ಇಂದು ನಾಡಿನ ಅಸಂಖ್ಯಾತ ಹಿಂದುಳಿದ ವರ್ಗಗಳ ಜನರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಏಳಿಗೆ ಹೊಂದಲು ಸಾಧ್ಯವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.

ಡಿ.ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಶುಭ ಸಂದೇಶ ನೀಡಿರುವ ಅವರು, ಅರಸು ಅವರನ್ನು ರಾಜ್ಯ ಕಂಡ ಧೀಮಂತ ರಾಜಕಾರಣಿ, ಸಾಮಾಜಿಕ ಕ್ರಾಂತಿಯ ಹರಿಕಾರ ಹಾಗೂ ಹಿಂದುಳಿದ ವರ್ಗಗಳ ನೇತಾರ ಎಂದು ಬಣ್ಣಿಸಿದ್ದಾರೆ. ದಿಟ್ಟ ನಿರ್ಧಾರದಿಂದ ಭೂಸುಧಾರಣೆ ಹಾಗೂ ಉಳುವವನೆ ಭೂ ಒಡೆಯ ಕಾನೂನು ಜಾರಿ ಮಾಡುವುದರ ಮೂಲಕ ಗೇಣಿದಾರರ ಕಪಿಮುಷ್ಠಿಯಿಂದ ರೈತಾಪಿ ಕೂಲಿವರ್ಗದವರನ್ನು ಭೂ ಒಡೆಯರನ್ನಾಗಿ ಮಾಡಿದ ಕೀರ್ತಿ ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಇಂತಹ ಮಹಾನ್ ನೇತಾರರ ತತ್ವ, ಆದರ್ಶಗಳನ್ನು ನಮ್ಮಲ್ಲಿ ಮೈಗೂಡಿಸಿಕೊಂಡು ಅವರ ಆಶೋತ್ತರಗಳನ್ನು ಸಾಕಾರಗೊಳಿಸಲು ನಾವೆಲ್ಲರೂ ಶ್ರಮಿಸೋಣ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಶುಭ ಸಂದೇಶದಲ್ಲಿ ಕರೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net