

ಚಿತ್ರದುರ್ಗ: ದೇಶದಲ್ಲಿ 2.3 ಕೋಟಿ ಬಾಲವಧುಗಳಿದ್ದಾರೆ ಎಂಬುದೇ ಬೇಸರದ ಸಂಗತಿ. ಈ ಕುರಿತು ಸರ್ವೋಚ್ಛ ನ್ಯಾಯಾಲಯಕ್ಕೆ ಕೇಂದ್ರ ಸರ್ಕಾರವೇ ಮಾಹಿತಿ ನೀಡಿದೆ ಎಂದು ಹೈಕೋರ್ಟ್‌ನ ನ್ಯಾಯಮೂರ್ತಿ ಆರ್.ನಟರಾಜ್ ತಿಳಿಸಿದರು.
ಬಾಲ್ಯ ವಿವಾಹ, ಬಾಲ್ಯ ಗರ್ಭಾವಸ್ಥೆ ತಡೆ ಸಂಬಂಧ ನಗರದಲ್ಲಿ ಭಾನುವಾರ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕದಲ್ಲೇ 1.33 ಲಕ್ಷ ಬಾಲವಧುಗಳಿರುವ ವಿಷಯ ತಿಳಿದು ಬಂದಿದೆ. ಸಂಖ್ಯೆಯ ಹೆಚ್ಚಳ ಬಾಲ್ಯವಿವಾಹ ಎಂಬ ಪಿಡುಗಿನ ವ್ಯಾಪಕತೆಯನ್ನು ಸ್ಪಷ್ಟಪಡಿಸುತ್ತಿದೆ. ಇದನ್ನು ತಡೆಯಲು ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಬಾಲ್ಯ ವಿವಾಹ ಮಾದರಿಯಲ್ಲಿ ಬಾಲ ಗರ್ಭಾವಸ್ಥೆಯೂ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಈ ಕುರಿತು ಪರಿಣಾಮಕಾರಿ ಜಾಗೃತಿ ಅಗತ್ಯ ಎಂದರು.