ಧರ್ಮಸ್ಥಳ ಯೋಜನೆಯಿಂದ ಆರ್ಥಿಕ ಪ್ರಗತಿ

darmastala
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪೃಥ್ವಿ ಜ್ಞಾನ ವಿಕಾಸ ಕೇಂದ್ರದಿಂದ ಏರ್ಪಡಿಸಿದ್ದ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮದಲ್ಲಿ ಶಿಕ್ಷಕಿ ಶ್ವೇತಾ, ಸಮನ್ವಯ ಅಧಿಕಾರಿ ಗೌರಮ್ಮ, ಧರ್ಮಪ್ಪ, ಶ್ವೇತಾ ರಾಯ್ಕರ್ ಇತರರಿದ್ದರು.
Published on

ತ್ಯಾಗರ್ತಿ: ಮಹಿಳೆಯರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಅನೇಕ ಸೌಲಭ್ಯಗಳನ್ನು ಪಡೆದು ಆತ್ಮವಿಶ್ವಾಸದಿಂದ ಬದುಕುತ್ತಿದ್ದಾರೆ ಎಂದು ಹೊಸಂತೆ ಸರ್ಕಾರಿ ಶಾಲೆ ಶಿಕ್ಷಕಿ ಶ್ವೇತಾ ಹೇಳಿದರು ಸಮೀಪದ ಹೊಸಂತೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪೃಥ್ವಿ ಜ್ಞಾನ ವಿಕಾಸ ಕೇಂದ್ರದಿಂದ ಮಂಗಳವಾರ ಏರ್ಪಡಿಸಿದ್ದ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಿಳೆ ಕೇವಲ ಅಡುಗೆ ಮನೆಗೆ ಸೀಮಿತವಾಗಿಲ್ಲ. ಪ್ರತಿಯೊಂದು ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ ಎಂದು ಹೇಳಿದರು. ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಗೌರಮ್ಮ ಸದಸ್ಯರಿಗೆ ಯೋಜನೆಯ ಪ್ರಗತಿ ಹಾಗೂ ಉದ್ದೇಶಗಳ ಬಗ್ಗೆ ಮಾಹಿತಿ ನೀಡಿದರು. ಮಹಿಳೆಯರು ವರಮಹಾಲಕ್ಷ್ಮೀ ದೇವಿ ಮೂರ್ತಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿದರು. ಮೇಲ್ವಿಚಾರಕ ಧರ್ಮಪ್ಪ, ಒಕ್ಕೂಟದ ಅಧ್ಯಕ್ಷೆ ಕವಿತಾ, ಸೇವಾ ಪ್ರತಿನಿಧಿ ಶ್ವೇತಾ ರಾಯ್ಕರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net