ಧ್ವನಿ ಇಲ್ಲದವರಿಗೆ ಧನಿ ಆದವರು ದೇವರಾಜ ಅರಸು / ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರು ಶ್ರಮಿಸಿದ್ದರು. ಧ್ವನಿ ಇಲ್ಲದವರಿಗೆ ಧನಿಯಾಗಿದ್ದರು. ಜಮೀನ್ದಾರರ ಬಳಿ ಕೂಲಿ ಕೆಲಸ ಮಾಡಿಕೊಂಡಿದ್ದ ಜನರಿಗೆ ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದು ಅನೇಕ ಬಡ ಜನತೆಗೆ ಅಪಾರ ಕೊಡುಗೆ ನೀಡಿ ಧಣಿಗಳಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಹಾಗೂ ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ನಗರದ ಟಿ.ಚನ್ನಯ್ಯ ರಂಗಮAದಿರದಲ್ಲಿ ಏರ್ಪಡಿಸಲಾಗಿದ್ದ ಡಿ. ದೇವರಾಜ ಅರಸು ಅವರ ೧೧೦ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇವರಾಜ ಅರಸು ಅವರು ಅನೇಕ ಕ್ರಾಂತಿಕಾರಿ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಹಿಂದುಳಿದ ವರ್ಗಗಳ, ಕುಟುಂಬಗಳ ಸರ್ವತೋಮುಖ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅಂತಹ ಆದರ್ಶಗಳನ್ನು ಪಾಲಿಸುವ ಮೂಲಕ ಅವರ ಕನಸನ್ನು ನನಸು ಮಾಡಲು ಎಲ್ಲರೂ ಶ್ರಮಿಸಬೇಕು ಎಂದರು.

ಮಲ ಹೊರುವ ಪದ್ದತಿ, ಜೀತ ಪದ್ದತಿಗಳಂತಹ ಸಾಮಾಜಿಕ ಅನಿಷ್ಟಗಳನ್ನು ನಿರ್ಮೂಲನೆ ಮಾಡುವಲ್ಲಿ ಡಿ. ದೇವರಾಜ ಅರಸು ಅವರ ಪಾತ್ರ ಅಪಾರವಾಗಿದೆ. ಉಳುವವನೇ ಭೂಮಿಯ ಒಡೆಯ ಎಂಬ ಭೂ ಸುಧಾರಣೆ ಕಾಯ್ದೆ ಜಾರಿಗೆ ತರುವ ಮೂಲಕ ದೇವರಾಜ ಅರಸು ಅವರು ರಾಷ್ಟ್ರಕ್ಕೆ ಮಾದರಿಯಾಗಿದ್ದಾರೆ ಎಂದು ಹೇಳಿದರು.

ಕಳೆದ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಮತ್ತು ಪಿಹೆಚ್ಡಿ ಪದವಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಪಿ ಭಾಗೇವಾಡಿ ಅವರು ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಅರಸು ಜಯಂತಿ ಅಂಗವಾಗಿ ಪ್ರಬಂಧ ಸ್ಪರ್ಧೆ ಹಾಗೂ ಇತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ವಿತರಿಸಿದರು.

ಡಾ. ಶಂಕರಪ್ಪ ಉಪನ್ಯಾಸ ನೀಡಿ, ಡಿ.ದೇವರಾಜ ಅರಸು ಅವರು ರಾಜ್ಯದ ಚರಿತ್ರೆ ಸೃಷ್ಟಿಗೆ ಮೊದಲಿಗರಾಗಿದ್ದರು. ರಾಜಕಾರಣ ಮಾಡದೇ ರಾಜ್ಯದ ಅಭಿವೃದ್ಧಿ ಮತ್ತು ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಪಣತೊಟ್ಟು ಕೆಲಸ ಮಾಡಿದವರು ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಶಂಕರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಗೀತಮ್ಮ, ನಗರಸಭೆ ಅಧ್ಯಕ್ಷೆ ಕೆ.ಲಕ್ಷ್ಮೀದೇವಮ್ಮ, ಹಿಂದುಳಿದ ವರ್ಗಗಳ ಒಕ್ಕೂಟ ಅಧ್ಯಕ್ಷ ಎಲ್.ಪ್ರಸಾದ್ ಬಾಬು, ಎಲ್.ಎ.ಮಂಜುನಾಥ್, ಉಪಾಧ್ಯಕ್ಷರಾದ ನಂದೀಶ್, ಫಾಲ್ಗುಣ, ಎಸ್.ಮಂಜುನಾಥ್, ಕಲಾವಿದ ಕೃಷ್ಣ, ಮುನಿಕೃಷ್ಣ, ಗೋವಿಂದರಾಜು, ಶಿವಶಂಕರ್, ಧನಜಯರಾಜ್, ರಾಜೇಶ್ ಸಿಂಗ್, ಶಂಕರ್ ಕೊಂಡೆ, ಮಲ್ಲೇಶಪ್ಪ, ದೀಪು ದಿವಾಕರ್, ಕಲ್ಲೇಶ್, ಗಿರೀಶ್, ಶ್ರೀನಿವಾಸ್, ರಾಮಮೂರ್ತಿ ನಾಯ್ಡು, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಚಿತ್ರ ೨೦ ಕೆ.ಎಲ್.ಆರ್. ೦೩ : ದಿ.ದೇವರಾಜು ಅರಸು ರವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎಂ.ಆರ್.ರವಿ ಉದ್ಘಾಟಿಸಿದರು. ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ರವಿಶಂಕರ್, ನಗರಸಭೆ ಅಧ್ಯಕ್ಷೆ ಲಕ್ಷಿö್ಮÃದೇವಮ್ಮ ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net