

ಸ್ಕೂಟರ್ ನಂಬರ್ ಪ್ಲೇಟ್ ಸಂಖ್ಯೆಯ ಮೇಲೆ ಸ್ಟಿಕ್ಕರ್ ಅಂಟಿಸಿ ಸಂಚಾರ ನಿಯಮಗಳನ್ನ ಉಲ್ಲಂಘಿಸುತ್ತಿದ್ದ ವ್ಯಕ್ತಿಯನ್ನು ವಿವಿ ಪುರಂ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಲವತ್ತ ಗ್ರಾಮದ ವಸಂತ್ ಎಂಬಾತನೆ ಪೊಲೀಸರ ಕೈಗೆ ಸಿಕ್ಕಿಬಿದ್ದ ವ್ಯಕ್ತಿ. ಈತ ತನ್ನ ಸ್ಕೂಟರ್ ನಂಬರ್ ಪ್ಲೇಟ್‌ನಲ್ಲಿರುವ ಸಂಖ್ಯೆಗಳ ಮೇಲೆ ಸ್ಟಿಕ್ಕರ್ ಅಂಟಿಸಿ ಸಂಚಾರ ನಿಯಮ ಉಲ್ಲಂಘಿಸುತ್ತ ಪೊಲೀಸರನ್ನು ಯಾಮಾರಿಸುತ್ತಿದ್ದ. ನಗರದ ಬಿ.ಸಿ. ಲಿಂಗಯ್ಯ ವೃತ್ತದಲ್ಲಿ ವಿವಿ ಪುರಂ ಸಂಚಾರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಶಬರೀಶ್ ನೇತೃತ್ವದ ತಂಡ ವಾಹನ ತಪಾಸಣೆ ನಡೆಸುವಾಗ ವಸಂತ್ ತನ್ನ ವಾಹನದ ಕೊನೆ ನಂಬರ್ ಮೇಲೆ ಸ್ಟಿಕ್ಕರ್ ಅಂಟಿಸಿರುವುದು ಕಂಡುಬಂದಿದೆ. ಬಳಿಕ ಆತನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವಿವಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.