ನಗರದಲ್ಲಿ ಸ್ವಾತಂತ್ರö್ಯ ದಿನಾಚರಣೆಯ್ನನು ಅದ್ಧೂರಿ ಹಾಗೂ ಅಚ್ಚುಕಟ್ಟಾಗಿ ಆಚರಣೆ ಮಾಡಲು ಜಿಲ್ಲಾಧಿಕಾರಿಗಳು ಸೂಚನೆ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಆ.೧೫ ರಂದು ಜರುಗುವ ಸ್ವಾತಂತ್ರ‍್ಯೋತ್ಸವ ದಿನಾಚರಣೆ ಅಚ್ಚುಕಟ್ಟಾಗಿ ಶಿಸ್ತಿನಿಂದ ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲಾ ಅಧಿಕಾರಿಗಳು ಕೈ ಜೋಡಿಸಬೇಕು, ಪೂರ್ವ ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಛೇರಿ ಕೇಸ್ವಾನ್ ಸಭಾಂಗಣದಲ್ಲಿ ಸೋಮವಾರ ಸ್ವಾತಂತ್ರ‍್ಯ ದಿನಾಚರಣೆ ಕುರಿತು ಜರುಗಿದ ಅಂತಿಮ ಸಿದ್ಧತೆಗಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಸಂಬAಧಿತ ಅಧಿಕಾರಿಗಳಿಗೆ ಕಾರ್ಯಕ್ರಮದ ಯಶಸ್ವಿನ ಕುರಿತಂತೆ ಸೂಕ್ತ ನಿರ್ದೇಶನಗಳನ್ನು ನೀಡಿ ಮಾತನಾಡಿದರು.

ನಗರದ ಸರ್ ಎಂ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಎಸ್. ಸುರೇಶ್ ಅವರು ಆಗಸ್ಟ್ ೧೫ ರಂದು ಬೆಳಿಗ್ಗೆ ೯ ಗಂಟೆಗೆ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಕ್ರೀಡಾಂಗಣದಲ್ಲಿ ನೆರೆದ ಸಾರ್ವಜನಿಕರಿಗೆ ಸ್ವಾತಂತ್ರ‍್ಯೋತ್ಸವದ ಸಂದೇಶ ನೀಡುವರು.

ಶಾಲಾ ಮಕ್ಕಳು ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ಮುಂಚೆಯೇ ಆಗಮಿಸಿ ನಿಗಧಿತ ಸ್ಥಳದಲ್ಲಿ ಕುಳಿತುಕೊಂಡು ಕಾರ್ಯಕ್ರಮ ಮುಗಿಯುವವರೆಗೆ ಹಾಜರಿರುವಂತೆ ಆಯಾ ಶಾಲೆಯ ಶಿಕ್ಷಕರು ಹಾಗೂ ನಿಯೋಜಿಸಿದ ಅಧಿಕಾರಿಗಳು ನಿಗಾ ವಹಿಸಬೇಕು. ಬೆಳಿಗ್ಗೆ ೮.೩೦ ರೊಳಗಾಗಿ ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಕ್ರೀಡಾಂಗಣದಲ್ಲಿ ತಮ್ಮ ಇಲಾಖಾ ಸಿಬ್ಬಂದಿಗಳೊAದಿಗೆ ಹಾಜರಿರಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು, ಸನ್ಮಾನ ಸಮಾರಂಭಗಳು ನಡೆಯುವಾಗ ಯಾವುದೇ ಗೊಂದಲಗಳಾಗದAತೆ ಅಚ್ಚುಕಟ್ಟಾಗಿ ಜರುಗುವಂತೆ ಕ್ರಮ ವಹಿಸಬೇಕು. ತುರ್ತು ಪರಿಸ್ಥಿತಿಯಲ್ಲಿ ಅಂಬುಲನ್ಸ್ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದರು.

ವೇದಿಕೆಯಲ್ಲಿ ಶಿಷ್ಟಾಚಾರದಂತೆ ಕಾರ್ಯಕ್ರಮ ನಿರ್ವಹಣೆಯಾಗಬೇಕು. ನೆರೆದ ಸಾರ್ವಜನಿಕರೆಲ್ಲರಿಗೂ ಸಚಿವರ ಸಂದೇಶ ಕೇಳಿಸುವಂತೆ ಧ್ವನಿವರ್ಧಕದ ವ್ಯವಸ್ಥೆ ಮಾಡಬೇಕು. ಮತ್ತು ಮಕ್ಕಳಿಗೆ ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪ್ರತಿಯೊಂದು ಕಾರ್ಯಕ್ರಮ ನಿಗದಿಪಡಿಸಿದ ಸಮಯಕ್ಕೆ ಜರುಗುವಂತೆ ನಿಗಾ ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ಆಗಮಿಸಿದ ಶಾಲಾ ಮಕ್ಕಳು ಅನವಶ್ಯಕವಾಗಿ ಕ್ರೀಡಾಂಗಣದ ಹೊರ ಆವರಣದಲ್ಲಿ ಮಾರಾಟ ಮಾಡುವ ಕುರುಕಲು ತಿಂಡಿಯನ್ನು ಸೇವಿಸದಂತೆ ಶಾಲಾ ಶಿಕ್ಷಕರು ನಿಗಾ ವಹಿಸಬೇಕು. ಕಾರ್ಯಕ್ರಮ ಮುಗಿಯುವವರೆಗೆ ಶಾಲಾ ಮಕ್ಕಳು ಅಲ್ಲಿಯೇ ಕುಳಿತುಕೊಂಡು ನಂತರ ಶಾಂತಿಯುತವಾಗಿ ನಿರ್ಗಮಿಸುವಂತೆ ಕ್ರಮ ವಹಿಸಬೇಕು ಎಂದರು.

ಆ.೧೫ ಕ್ಕೂ ಮೊದಲು ಮೂರು ದಿನ ಮುಂಚಿತವಾಗಿಯೇ ನಗರಸಭೆಯ ಅಧಿಕಾರಿಗಳು ನಗರದ ಪ್ರಮುಖ ವೃತ್ತಗಳ ಸ್ವಚ್ಛತೆಗೆ ಹಾಗೂ ಜಿಲ್ಲಾ ಕ್ರೀಡಾಂಗಣದ ಸ್ವಚ್ಛತೆಗೆ ಆದ್ಯತೆ ವಹಿಸಿ ಶುಚಿಗೊಳಿಸಬೇಕು. ಅಲ್ಲದೇ ಪ್ರಮುಖ ವೃತ್ತಗಳಲ್ಲಿ ಮುಂಚಿತಾಗಿಯೇ ದೀಪಾಲಂಕಾರ ಮಾಡಬೇಕು ಎಂದು ಸೂಚಿಸಿದರು.

ಧ್ವಜ ಸ್ತಂಬ, ವೇದಿಕೆ ವ್ಯವಸ್ಥೆ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು. ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ‍್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಉತ್ಸಾಹದಿಂದ ಪಾಲ್ಗೊಳ್ಳಬೇಕೆಂದು ತಿಳಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಅಂಬಿಕಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀನಿವಾಸ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರಮೇಶ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಚಿತ್ರ ೧೧ ಕೆ.ಎಲ್.ಆರ್. ೦೫ : ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸ್ವಾತಂತ್ರೊö್ಯÃತ್ಸವ ದಿನಾಚರಣೆಯಲ್ಲಿ ಅಂತಿಮ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಂ.ಆರ್.ರವಿ, ಅಪರ ಜಿಲ್ಲಾಧಿಕಾರಿ ಮಂಗಳ, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಜಗದೀಶ್, ಎ.ಸಿ.ಮೈತ್ರಿ, ಯೋಜನಾ ನಿರ್ದೇಶಕಿ ಅಂಬಿಕಾ, ಡಿ.ಹೆಚ್.ಓ ಡಾ.ಶ್ರೀನಿವಾಸ್ ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net