ನಗರಸಭೆ ಮತ್ತು ಜಿಲ್ಲಾಡಳಿತದ ನಿರ್ಲಕ್ಷö್ಯದಿಂದ ೭೯ನೇ ಸ್ವಾತಂತ್ರೊö್ಯÃತ್ಸವದAದು ಮಹಾತ್ಮಾಗಾಂಧಿಜೀ ಪ್ರತಿಮೆಗೆ ಮಾಲಾರ್ಪಣೆ ಇಲ್ಲ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಸ್ವಾತಂತ್ರೋತ್ಸವ ದಿನಾಚರಣೆಯ ದಿನದಂದು ನಗರದ ಗಾಂಧಿವನದಲ್ಲಿ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡದೆ ಜಿಲ್ಲಾಡಳಿತ ಮತ್ತು ನಗರಸಭೆಯವರು ನಿರ್ಲ್ಯಕ್ಷö್ಯ ವಹಿಸಿದ್ದಾರೆಂದು ಸಾಮಾಜಿಕ ಕಾರ್ಯಕರ್ತ ಕೆ.ಎನ್.ರವೀಂದ್ರನಾಥ್ ಆರೋಪಿಸಿದ್ದಾರೆ.

ಪ್ರತಿವರ್ಷ ಜಿಲ್ಲಾಡಳಿತ, ನಗರಸಭೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಗಾಂಧಿವನಕ್ಕೆ ಭೇಟಿ ಕೊಟ್ಟು ಅಲ್ಲಿನ ಮಹಾತ್ಮಾ ಗಾಂಧಿ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಸ್ಟೇಡಿಯಂನಲ್ಲಿ ನಡೆಯುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದರು. ಈ ಬಾರಿ ಅದನ್ನು ಮರೆತು ಸ್ವಾತಂತ್ರö್ಯ ತಂದು ಕೊಟ್ಟ ಮಹನೀಯರಿಗೆ ಅವಮಾನ ಮಾಡಿದ್ದಾರೆ.

ಮಹಾತ್ಮ ಗಾಂಧೀಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಕೆ.ಎನ್.ರವೀಂದ್ರನಾಥ್ ಮಹನೀಯರು ಹೋರಾಟ ಮತ್ತು ತ್ಯಾಗದಿಂದ ಗಳಿಸಿಕೊಟ್ಟ ಸ್ವಾತಂತ್ರö್ಯವನ್ನು ಉಳಿಸಿಕೊಂಡು ಹೋಗುವುದು ನಮ್ಮ ಜವಾಬ್ದಾರಿಯಾಗಿದೆ. ಕೋಲಾರ ಜಿಲ್ಲೆಯು ರಾಜ್ಯಕ್ಕೆ ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿಯವರನ್ನು ಕೊಟ್ಟಂತಹ ಜಿಲ್ಲೆಯಾಗಿದೆ. ಸ್ವಾತಂತ್ರö್ಯ ಸಂಗ್ರಾಮದಲ್ಲಿ ಗಾಂಧೀಜಿಯವರ ಜೊತೆಗೂಡಿದ ದಿ.ಚನ್ನಯ್ಯನವರನ್ನು ಸ್ಮರಿಸಬೇಕಾಗುತ್ತದೆ. ಇಂತಹ ಮಹನೀಯರು ನಮ್ಮ ಜಿಲ್ಲೆಯಲ್ಲಿ ಇರುವುದು ನಮಗೆ ಹೆಮ್ಮೆ. ಅಂತವರನ್ನು ರಾಷ್ಟಿçÃಯ ಹಬ್ಬಗಳ ಸಂದರ್ಭದಲ್ಲಿ ಗೌರವಿಸಬೇಕಾಗಿರುವುದು ಜಿಲ್ಲಾಡಳಿತ ಮತ್ತು ನಗರಸಭೆಯವರದ್ದು ಆಗಿರುತ್ತದೆ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚೆತ್ತುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಚಿತ್ರ ೧೬ ಕೆ.ಎಲ್.ಆರ್. ೦೧ : ಜಿಲ್ಲಾಡಳಿತ ಮತ್ತು ನಗರಸಭೆಯವ ನಿರ್ಲ್ಯಕ್ಷö್ಯಕ್ಕೆ ಒಳಗಾಗಿದ್ದ ಗಾಂಧಿವನದಲ್ಲಿರುವ ಮಾಹಾತ್ಮ ಗಾಂಧೀಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಸಾಮಾಜಿಕ ಕಾರ್ಯಕರ್ತ ಕೆ.ಎನ್.ರವೀಂದ್ರನಾಥ್.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net