ನಮ್ಮ ನಡಿಗೆ ಆರೋಗ್ಯವಂತ ವಿಶ್ವದೆಡೆಗೆ

Walking
Published on

ವಿಶ್ವ ಶಾಂತಿ ಹಾಗೂ ನಮ್ಮ ನಡಿಗೆ ಆರೋಗ್ಯವಂತ ವಿಶ್ವದೆಡೆಗೆ ಎಂಬ ಘೋಷವಾಕ್ಯದಡಿ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಮಾ.17ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 5.30ಕ್ಕೆ ದತ್ತಪೀಠಾಧಿಪತಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಆಶೀರ್ವಾದದೊಂದಿಗೆ ಕಿರಿಯ ಶ್ರೀಗಳಾದ ದತ್ತವಿಜಯಾನಂದ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಶ್ರೀಕಂಠೇಶ್ವರಸ್ವಾಮಿ ಸನ್ನಿಧಿಗೆ ಈ ಪಾದಯಾತ್ರೆ ಸಾಗಲಿದೆ.

ಮನುಷ್ಯನ ಉತ್ತಮ ಆರೋಗ್ಯಕ್ಕೆ ಕಾಲ್ನಡಿಗೆ ಅತ್ಯುತ್ತಮ ವ್ಯಾಯಾಮ ಎಂಬ ಕುರಿತು ಜನ ಜಾಗೃತಿ ಮೂಡಿಸುವ ಸಲುವಾಗಿ ಈ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net