‘ನಾಡ ಕುಸ್ತಿ’ ಪರಂಪರೆ ವಿಜೃಂಭಿಸಿತು

14cnhalli kusthi
Published on

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಬಳಿಕ ನಗರದಲ್ಲಿ ಅಕ್ಷರಶಃ ‘ನಾಡ ಕುಸ್ತಿ’ ಪರಂಪರೆ ವಿಜೃಂಭಿಸಿತು. ನಿರೀಕ್ಷೆಗೂ ಮೀರಿ ಸೇರಿದ್ದ ಪ್ರೇಕ್ಷಕರು ನೆಚ್ಚಿನ ಹುರಿಯಾಳುಗಳನ್ನು ಹುರಿದುಂಬಿಸುತ್ತಿದ್ದರು. ಮಟ್ಟಿ ಮೇಲೆ ಜಟ್ಟಿತನ ಮೆರೆದ ಪೈಲ್ವಾನರಿಗೆ ಶಿಳ್ಳೆ, ಚಪ್ಪಾಳೆಯ ಪ್ರೋತ್ಸಾಹವನ್ನು ನೀಡುತ್ತಿದ್ದರು...!

ಇದು ಅಶೋಕಪುರಂ ಪೈಲ್ವಾನ್ ಪುರುಷೋತ್ತಮ್ ಅಭಿಮಾನಿಗಳ ಬಳಗದಿಂದ ನಗರದ ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಕಾಟ ಕುಸ್ತಿ ಪಂದ್ಯಾವಳಿಯಲ್ಲಿ ಕಂಡು ಬಂದ ದೃಶ್ಯ.

ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡುತ್ತಿದ್ದಂತೆ ಕ್ರೀಡಾಂಗಣದ ಮೂಲೆ - ಮೂಲೆಯಲ್ಲೂ ನೆಚ್ಚಿನ ಪೈಲ್ವಾನರಿಗೆ ಜೈಕಾರಗಳು ಮೊಳಗಿತು. ಬಗೆ, ಬಗೆಯ ಹೂಗಳಿಂದ ಅಲಂಕಾರಗೊಂಡ ಮಟ್ಟಿಯ ಮೇಲೆ ಹುಬ್ಬೇರಿದ ಪೈಲ್ವಾನರು ವಿವಿಧ ಪಟ್ಟು ಪ್ರದರ್ಶಿಸಿ ಮದಗಜಗಳ ರೀತಿ ಸೆಣೆಸುತ್ತಿದ್ದಂತೆ ಕಿಕ್ಕಿರಿದು ಸೇರಿದ್ದ ಕುಸ್ತಿ ಪ್ರೇಮಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಇನ್ನು ನೆಚ್ಚಿನ ಜಟ್ಟಿಗಳು ಪರಾಕ್ರಮ ಮೆರೆದು ಎದುರಾಳಿಯನ್ನು ಚಿತ್‌ಮಾಡಿದಾಗ ಶಿಳ್ಳೆ, ಚಪ್ಪಾಳೆಗಳಿಂದ ಅಭಿನಂದನೆ ಸಲ್ಲಿಸುತ್ತಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net