ನಾಡದೇವತೆ ಚಾಮುಂಡೇಶ್ವರಿ ದೇವಿಗೆ ದರ್ಶನ ಪಡೆದ ದರ್ಶನ್ ಪತ್ನಿ ವಿಜಯಲಕ್ಷ್ಮೀ

Darshan
Published on

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸೋಮವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ದರ್ಶನ ಮಾಡಿದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಅತ್ತೆ ಮೀನಾ ತೂಗುದೀಪ, ದಿನಕರ್ ಸೇರಿದಂತೆ ಕುಟುಂಬದ ಸದಸ್ಯರೊಂದಿಗೆ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಹರಕೆ ತೀರಿಸಿದರು.

ದರ್ಶನ್ ಜೈಲಿನಲ್ಲಿದ್ದಾಗ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರ ಬಂದರೆ ವಿಶೇಷ ಪೂಜೆ ಸಲ್ಲಿಸುವುದಾಗಿ ವಿಜಯಲಕ್ಷ್ಮೀ ಅವರು ಚಾಮುಂಡೇಶ್ವರಿ ದೇವಿಯಲ್ಲಿ ಹರಕೆ ಹೊತ್ತಿದ್ದರು. ಕಳೆದ ಶುಕ್ರವಾರ ಮೈಸೂರಿಗೆ ತೆರಳಲು ಅನುಮತಿ ಸಿಕ್ಕಿದ ಹಿನ್ನಲೆಯಲ್ಲಿ ದರ್ಶನ್ ಮೈಸೂರಿಗೆ ಆಗಮಿಸಿ, ತಿ.ನರಸೀಪುರ ರಸ್ತೆಯಲ್ಲಿರುವ ತಮ್ಮ ಫಾರಂ ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net