ನಾನು ಎಂದೂ ಪಾಪದ ಹಣಕ್ಕೆ ಆಸೆ ಪಟ್ಟವನಲ್ಲ

Published on


ವಿಜಯವಾಣಿ ಸುದ್ದಿಜಾಲ ಬೆಂಗಳೂರು
ನಾನು ರಾಜಕಾರಣದಲ್ಲಿ ಎಂದೂ ಪಾಪದ ಹಣಕ್ಕೆ ಆಸೆಪಟ್ಟವನಲ್ಲ. ನಾನು ಬಿಜೆಪಿ ಅಭ್ಯರ್ಥಿ ಜತೆ ಒಳ ಒಪ್ಪಂದ ಮಾಡಿಕೊಂಡಿದ್ದೇನೆ ಎಂಬ ಗಾಳಿಸುದ್ದಿ ಹಬ್ಬಿಸುತ್ತಿದ್ದಾರೆ.ಯಾರೋಂದಿಗೂ ಒಳ ಒಪ್ಪಂದ ಮಾಡಿಕೊಳ್ಳುವ ಪ್ರಮೇಯ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್ ಮುಖಂಡರ ಸಭೆ ಉದ್ದೇಶಿಸಿ ಮಾತನಾಡಿದರು.
ಒಪ್ಪಂದ ಮಾಡಿಕೊಳ್ಳುವುದಾದರೆ ಒಪನ್ ಆಗಿಯೇ ಮಾಡಿಕೊಳ್ಳುತ್ತೇವೆ. ಅದರಲ್ಲಿ ಮುಚ್ಚುಮರೆ ಏನಿಲ್ಲ. ಈ ಚುನಾವಣೆಯಲ್ಲಿ ನಾವು ಜನರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದರು.
ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ತಂದೆ ಇಲ್ಲಿಂದ ಅಲ್ಲಿ, ಅಲ್ಲಿಂದ ಇಲ್ಲಿಗೆ ಪಕ್ಷಾಂತರ ಮಾಡುವವರು. ನಾವಲ್ಲ ಎಂದು ಹೇಳಿದರು.
ಎಲ್ಲರ ಜತೆ ಚರ್ಚೆ ಮಾಡಿಯೇ ಒಮ್ಮತದ ನಿರ್ಧಾರ ತೆಗೆದುಕೊಂಡು ಕೃಷ್ಣಮೂರ್ತಿ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದೇವೆ. ಗಾಳಿ ಸುದ್ದಿಯನ್ನೆಲ್ಲ ನಂಬ ಬೇಡಿ ಎಂದು ತಿಳಿಸಿದರು.
ಈ ಭಾಗದ ಕಾಂಗ್ರೆಸ್ ಲೋಕಸಭಾ ಸದಸ್ಯರಿಗೆ ಈಗ ಕ್ಷೇತ್ರದ ಮೇಲೆ ಪ್ರೀತಿ ಬಂದಿದೆ.
ಈ ಕ್ಷೇತ್ರದಲ್ಲಿ ಕೆಲಸವೇ ಮಾಡದೇ 250 ಕೋಟಿ ಹಣ ಲೂಟಿ ಮಾಡಲಾಗಿದೆ ಎಂಬ ಸುದ್ದಿ ಪತ್ರಿಕೆಗಳಲ್ಲಿ ಬಂದಿದೆ. ಇಂತಹ ಹಣದಿಂದಲೇ ಈ ಚುನಾವಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ಬಂದು ಕಾಂಗ್ರೆಸ್ ಸರ್ಕಾರ ಹತ್ತು ಪರ್ಸೆಂಟ್ ಸರ್ಕಾರ ಎಂದರು.

ಸಿದ್ದರಾಮಯ್ಯ ಅವರು ಬಿಜೆಪಿ ಅವರದ್ದು ಹತ್ತು ಪರ್ಸೆಂಟ್ ಸರ್ಕಾರ ಎನ್ನುತ್ತಿದ್ದಾರೆ. ಆದರೆ, ನಮ್ಮ ಬಗ್ಗೆ ಅಂತಹ ಆರೋಪಗಳಿಲ್ಲ. ಯೋಚಿಸಿ ಮತ ನೀಡಿ ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net