ನಾಮ ನಿರ್ದೇಶಿತ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

Application
Published on

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಆಯ್ಕೆ ಮಾಡುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಗೆ 02 ವರ್ಷಗಳ ಅವಧಿಗೆ ಒಬ್ಬ ಅಧಿಕಾರೇತರ ಸದಸ್ಯರನ್ನು ಆಯ್ಕೆ ಮಾಡಬೇಕಾಗಿದ್ದು, ಸದಸ್ಯರಾಗಬಯಸುವ ವಿಶ್ವಕರ್ಮ ಜನಾಂಗದವರಿoದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ವಿಶ್ವಕರ್ಮ ಜನಾಂಗದವರಾಗಿದ್ದು, ಜಾತಿ ಪತ್ರ ಲಗತ್ತಿಸಬೇಕು, ಜಿಲ್ಲೆಯ ಸಮಗ್ರ ಮಾಹಿತಿ ಹಾಗೂ ವಿಶ್ವಕರ್ಮ ಜನಾಂಗದವರ ಅಂಕಿ ಅಂಶಗಳ ಮಾಹಿತಿ ತಿಳಿದಿರಬೇಕು. ನಿಗಮದಲ್ಲಿ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಯೋಜನೆಗಳ ಪರಂಪರಾಗತವಾಗಿ ಸ್ವಂತ ನಿರ್ವಹಿಸಿರುವ ಅನುಭವ ಹೊಂದಿರಬೇಕು (ಅನುಭವ ಪತ್ರ ಸಲ್ಲಿಸುವುದು), ಅರ್ಜಿದಾರರು ಯಾವುದೇ ಕ್ರಿಮಿನಲ್ ಮೊಕದ್ದಮೆ/ಶಿಕ್ಷೆ ಅನುಭವಿಸಿರಬಾರದು (ಸಂಬoಧಿಸಿದವರಿoದ ಪ್ರಮಾಣ ಪಡೆದು ಸಲ್ಲಿಸುವುದು) ಅರ್ಜಿದಾರರು ಸರಳ ಸಜ್ಜನಿಕೆ ಹಾಗೂ ಇತರರೊಂದಿಗೆ ಗೌರವಾನ್ವಿತವಾಗಿ ವರ್ತಿಸಬೇಕು. ಈ ಎಲ್ಲಾ ದಾಖಲಾತಿಗಳೊಂದಿಗೆ ಏಪ್ರಿಲ್ 17 ರೊಳಗೆ ಕಚೇರಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ದೂ.ಸಂ: 0821-2341194 ಅನ್ನು ಸಂಪರ್ಕಿಸಬೇಕು ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net