ನಾರಾಯಣಗುರು ಸಾಮಾಜಿಕ ಸುಧಾರಣೆಯ ಹರಿಕಾರ

narayana
ಬಣಕಲ್ ಹಿರೇಬೈಲ್‌ನ ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದಿಂದ ನಾರಾಯಣಗುರು ಜಯಂತಿ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷ ರಾಮಚಂದ್ರ, ಉಪನ್ಯಾಸಕ ನವೀನ್ ಆನೆದಿಬ್ಬ ಇತರರಿದ್ದರು.
Published on

ಬಣಕಲ್: ಸಾಮಾಜಿಕ ಸುಧಾರಣೆಯ ಹರಿಕಾರರಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆಗಳು ಸಮಾಜ ಸುಧಾರಣೆಗೆ ಪೂರಕ ಎಂದು ಉಪನ್ಯಾಸಕ ನವೀನ್ ಆನೆದಿಬ್ಬ ಹೇಳಿದರು.

ಬಣಕಲ್ ಹಿರೇಬೈಲ್‌ನ ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದಿಂದ ಏರ್ಪಡಿಸಿದ್ದ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
ನಾರಾಯಣಗುರುಗಳ ಕ್ರಾಂತಿಕಾರಿ ನಡೆ ಹಿಂದುಳಿದ ವರ್ಗಕ್ಕೆ ಮಾತ್ರವಲ್ಲದೆ ಎಲ್ಲ ಸಮುದಾಯಕ್ಕೂ ಇಂದು ಪ್ರಸ್ತುತವಾಗಿದೆ. ಅವರ ತತ್ವದಲ್ಲಿ ಹಲವು ಧರ್ಮಗಳು ಒಟ್ಟಾಗಿ ಜೀವಿಸುವ ಹಾಗೂ ದೇಶದ ಅಖಂಡತೆ ಪ್ರತಿಪಾದಿಸುವ ಚಿಂತನೆ ಅಡಗಿದೆ ಎಂದರು.
ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ಅಧ್ಯಕ್ಷ ರಾಮಚಂದ್ರ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ಜತೆಗೆ ಜಗತ್ತನ್ನು ಒಂದೇ ಜಾತಿ, ಒಂದೇ ಮತ, ಒಂದೇ ಧರ್ಮದಲ್ಲಿ ಕಂಡ ಅವರ ವ್ಯಕ್ತಿತ್ವವನ್ನು ನೆನಪಿಸುವುದು ಹಾಗೂ ಅವರ ತತ್ವ ಆದರ್ಶಗಳನ್ನು ಪಾಲನೆ ಮಾಡುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು.
ಹೂವಿನ ರಂಗೋಲಿ ಬಿಡಿಸುವ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net