

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿಬ್ಬಾಣ ದಿನದ ಅಂಗವಾಗಿ ಡಿ.6ರಂದು ಸಂಜೆ 6 ಗಂಟೆಗೆ ನಗರದ ಅಶೋಕಪುರಂನಲ್ಲಿ ಮೇಣದಬತ್ತಿ ಮೆರವಣಿಗೆ ಆಯೋಜಿಸಲಾಗಿದೆ ಎಂದು ನಗರ ಪಾಲಿಕೆ ಮಾಜಿ ಸದಸ್ಯೆ ಪಲ್ಲವಿ ಬೇಗಂ ಮನವಿ ಮಾಹಿತಿ ನೀಡಿದರು.
ಅಂದು ಅಂಬೇಡ್ಕರ್ ಭಾವಚಿತ್ರದೊಂದಿಗೆ ಹೊರಡುವ ಮೆರವಣಿಗೆಯಲ್ಲಿ ಸುಮಾರು ನಾಲ್ಕು ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ. ಅಂಬೇಡ್ಕರ್ ಅವರ ಚಿಂತನೆಗಳ ಬಗ್ಗೆ ಗೌರವ ಹೊಂದಿರುವ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಅಶೋಕಪುರಂನ ಎಲ್ಲ ಸಾರ್ವಜನಿಕರು ಹಾಗೂ ವಿವಿಧ ಸಂಘ, ಸಂಸ್ಥೆಗಳ ಸದಸ್ಯರು ಭಾಗವಹಿಸಲಿದ್ದಾರೆ. ಇದೊಂದು ಶಿಸ್ತುಬದ್ಧ ಮೆರವಣಿಗೆಯಾಗಿದೆ. ಅಂಬೇಡ್ಕರ್ ಅವರೊಬ್ಬರೇ ನಮಗೆ ಪರಮೋಚ್ಛರೆಂಬ ನಂಬಿಕೆ ಇದೆ. ಆದ್ದರಿಂದ ಯಾವುದೇ ಜನಪ್ರತಿನಿಧಿಗಳು ಹಾಗೂ ಇತರರನ್ನು ಆಹ್ವಾನಿಸದೆ ಭಾಗವಹಿಸುವವರೇ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದರು.
ಪ್ರಮುಖರಾದ ಲೇಖಕ ಸಿದ್ದಸ್ವಾಮಿ, ಪವಿತ್ರಾ, ಶಿವಣ್ಣ ಇದ್ದರು.