ನಾಳೆಯಿಂದ ರಾಜ್ಯದಲ್ಲಿ ಭಾರಿ ಮಳೆ

new
Published on

ಬೆಂಗಳೂರು: ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತದಿಂದ ನಿವಾರ್ ಚಂಡಮಾರುತ ಉಂಟಾಗಿರುವುದರಿಂದ ರಾಜ್ಯದಲ್ಲಿ ನ.25ರಿಂದ ನಾಲ್ಕು ದಿನ ಭಾರಿ ಮಳೆಯಾಗಲಿದೆ.


ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ನ.26ರಿಂದ ಎರಡು ದಿನ ಭಾರಿ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ನ.27ರಿಂದ ಎರಡು ದಿನ ಗುಡುಗು- ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿಯಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net