ನಿಗದಿತ ಅವಧಿಯಲ್ಲಿ ಪ್ರಗತಿ ಸಾಧಿಸಿ

bkt-20-4
ಬಾಗಲಕೋಟೆ ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಶುಕ್ರವಾರ ಜರುಗಿದ ೩ನೇ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ ಮೊಹಿಸಿನ್ ಮಾತನಾಡಿದರು.
Published on

ಬಾಗಲಕೋಟೆ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ನಿಗದಿಪಡಿಸಿದ ಅನುದಾನವನ್ನು ನಿಗದಿತ ಅವಽಯಲ್ಲಿ ಖರ್ಚು ಮಾಡುವ ಮೂಲಕ ಪ್ರಗತಿ ಸಾಧಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ ಮೊಹಿಸಿನ್ ಅಽಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಶುಕ್ರವಾರ ಜರುಗಿದ ೩ನೇ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಕಾಮಗಾರಿಗಳು ನಿಗದಿತ ಅವಯಲ್ಲಿ ಪೂರ್ಣಗೊಳಿಸಲು ಕ್ರಮವಹಿಸಬೇಕು. ಫಲಾನುಭವಿಗಳ ಆಯ್ಕೆ ಇದ್ದಲ್ಲಿ ಶಿಘ್ರವಾಗಿ ಅಂತಿಮ ಪಟ್ಟಿ ತಯಾರಿಸಿ ಫಲಾನುಭವಿಗಳು ಯೋಜನೆ ಲಾಭ ಪಡೆಯುವಂತೆ ಮಾಡಬೇಕು.

ಇನ್ನು ಕೆಲವು ಟೆಂಡರ ಪ್ರಕ್ರಿಯೆ ಹಂತದಲ್ಲಿದ್ದರೆ, ಇನ್ನು ಕೆಲವು ಕ್ರೀಯಾ ಯೋಜನೆ ತಯಾರಿಸಲು ಬಾಕಿ ಉಳಿದಿವೆ. ಇವೆಲ್ಲವುಗಳ ಕಾರ್ಯ ಬೇಗನೆ ಪೂರ್ಣಗೊಂಡು ಯೋಜನೆಗಳು ಸಫಲಗೊಳ್ಳುವಂತೆ ಮಾಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ, ರಾಜ್ಯ ಹಾಗೂ ಕೇಂದ್ರ ವಲಯದಡಿ ಕೃಷಿ ಇಲಾಖೆಗೆ ಬಿಡುಗಡೆಯಾದ ೭೬.೧೧ ಕೋಟಿ ರೂ.ಗಳ ಪೈಕಿ ೫೯.೮೩ ಕೋಟಿ ಖರ್ಚು ಮಾಡುವ ಮೂಲಕ ಶೇ.೭೮ ರಷ್ಟು, ತೋಟಗಾರಿಕೆ ಶೇ.೯೧ ರಷ್ಟು, ಅರಣ್ಯ ಇಲಾಖೆ ಶೇ.೧೦೦ ರಷ್ಟು, ರೆಷ್ಮೆ ಇಲಾಖೆ ಶೇ.೬೯ ರಷ್ಟು ಪ್ರಗತಿ ಸಾಽಸಿವೆ. ನರೇಗಾ ಯೋಜನೆಯಡಿ ಮಾನವ ದಿನಗಳ ಸೃಜನೆಯಲ್ಲಿ ಶೇ.೮೬ ರಷ್ಟು ಪ್ರಗತಿ ಸಾಽಸಿದ್ದು, ಮೂರು ತಿಂಗಳಲ್ಲಿ ಸಂಪೂರ್ಣ ಅನುದಾನ ಖರ್ಚು ಮಾಡಬೇಕೆಂದು ನಿರ್ದೇಶನ ನೀಡಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕೈಗೊಂಡ ಕಾಮಗಾರಿಗಳು ತುರ್ತಾಗಿ ಪೂರ್ಣಗೊಳಿಸಬೇಕು. ಕೆಲವೊಂದು ಕಡೆಗಳಲ್ಲಿ ಓವರ್ ನೀರಿನ ಟ್ಯಾಂಕ್ ನಿರ್ಮಿಸಲು ಅರಣ್ಯ ಇಲಾಖೆಯಿಂದ ಎನ್.ಒ.ಸಿ ವಿಳಂಭದಿಂದ ಕಾಮಗಾರಿಯಲ್ಲಿ ವಿಳಂಬವಾಗಿರುವುದಾಗಿ ಸಭೆಗೆ ತಿಳಿಸಿದಾಗ ಸಂಬಧಿಽಸಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ರೂಪಾ ಈ ಬಗ್ಗೆ ಮೇಲಾಽಕಾರಿಗಳ ಮೂಲಕ ಬೇಗನೆ ಎನ್.ಒ.ಸಿ ನೀಡಲು ಕ್ರಮವಹಿಸಲು ಸೂಚಿಸಿದರು. ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಗಳ ಕೊರತೆ ಇದ್ದು, ಭರ್ತಿಗೆ ಕ್ರಮ ಕೈಗೊಳ್ಳಲು ತಿಳಿಸಿದರು.

ಜಿಲ್ಲಾ ಆರೋಗ್ಯ ಇಲಾಖೆ ಕಟ್ಟಡ ನಿರ್ವಹಣೆಗೆ ೧೩ ಲಕ್ಷ ರೂ.ಗಳ ಅನುದಾನವಿದ್ದು, ಈ ಬಗ್ಗೆ ಇನ್ನು ಕ್ರಿಯಾಯೋಜನೆ ರೂಪಿಸಿಲ್ಲ ಏಕೆ ಎಂದು ಪ್ರಶ್ನಿಸಿದರು. ಪಿಆರ್‌ಇಡಿ ಅವರು ಎಸ್ಟಿಮೇಟ್ ಮಾಡಲು ಆರೋಗ್ಯ ಇಲಾಖೆಯಿಂದ ಮಾಹಿತಿ ಪಡೆಯಲು ಸೂಚಿಸಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಇದ್ದರೂ ಸಮಸ್ಯೆ ಇರುವದಿಲ್ಲವೆಂದು ಹೇಳುವುದು ಸರಿ ಇಲ್ಲ. ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಔಷಽ ಲಭ್ಯತೆ ಬಗ್ಗೆ ಪರಿಶೀಲನೆ ನಡೆಸಲು ತಿಳಿಸಿದರು. ವಿವಿಧ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ನಿಗದಿತ ವೇಳೆಯಲ್ಲಿ ವೇತನ ಪಾವತಿಗೆ ಕ್ರಮವಹಿಸಲು ಹೇಳಿದರು.

ವಿವಿಧ ನಿಗಮಗಳಲ್ಲಿರುವ ವಿವಿಧ ಯೋಜನೆಗಳ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ ಅನುಮೋದನೆ ಕಳುಹಿಸುವ ಕೆಲಸವಾಗಬೇಕು. ಗಂಗಾ ಕಲ್ಯಾಣ ಯೊಜನೆಯಡಿ ವಿದ್ಯುದ್ದೀಕರಣಕ್ಕೆ ೩೮೩ ಪೈಕಿ ೩೧೩ ಪ್ರಗತಿ ಸಾಽಸಿದ್ದು, ಬಾಕಿ ವಿದ್ಯುದ್ದೀಕರಣಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದರು. ನಿಗದಿತ ವೇಳೆಯಲ್ಲಿ ಹಾಲಿನ ಪುಡಿ ಶಾಲೆಗಳಿಗೆ ವಿತರಣೆಯಾಗದ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿವೇಕಾನಂದ ಸಭೆಗೆ ತಿಳಿಸಿದಾಗ ಸಂಬಂಧಿಸಿದ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧಿಕಾರಿಗಳಿಗೆ ಯಾವುದೇ ಸಬೂಬು ಹೇಳದೇ ನಿಗಿದಿತ ಅವಧಿಯಲ್ಲಿ ಹಾಲಿನ ಪುಡಿ ವಿತರಣೆಗೆ ಕ್ರಮವಹಿಸಲು ಸೂಚಿಸಿದರು. ಜಿಲ್ಲಾ ಮಟ್ಟದ ಇತರೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಮುಖ್ಯ ಯೋಜನಾಧಿಕಾರಿ ಪುನಿತ್ ಆರ್, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ ಸೇರಿದಂತೆ ಜಿಲ್ಲಾ ಮಟ್ಟದ ಅಽಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net