ನಿರ್ಲಕ್ಷ  ತೋರಿದರೆ ಶಿಸ್ತುಕ್ರಮ: ಶಾಸಕ ಮಂಜುನಾಥ್ ಎಚ್ಚರಿಕೆ

16 MGD P2
Published on

ಮಾಗಡಿ : ರೈತರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಬೇಕು. ಸಮಸ್ಯೆ ಬಗೆಹರಿಸದೆ ನಿರ್ಲಕ್ಷ  ತೋರಿಸುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎ.ಮಂಜುನಾಥ್ ಎಚ್ಚರಿಸಿದರು.

ತಾಲೂಕು ಕಚೇರಿ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಜನರ ಅಹವಾಲು ಸ್ವೀಕರಿಸಿ ಮಾತನಾಡಿ, ಸಾರ್ವಜನಿಕರ ಕೆಲಸ ಮಾಡಿಕೊಡಲು ಕಾಸು ಕೇಳುವ ಅಧಿಕಾರಿಗಳೆಲ್ಲ ಇಂದು ರಜೆ ಹಾಕಿದ್ದಾರೆ. ಅಂತಹವರಿಗೆ ಬಿಸಿ ಮುಟ್ಟಿಸುತ್ತೇನೆ ಎಂದರು.

ತಾಲೂಕು ಕಚೇರಿಯಲ್ಲಿ ಖಾತೆ, ಹಕ್ಕುಪತ್ರ ಮಾಡಿಕೊಡಲು ಕೆಲವು ಅಧಿಕಾರಿಗಳು ಜನರನ್ನು ಅಲೆದಾಡಿಸುತ್ತಾರೆ. ಇದು ಸರಿಯಲ್ಲ. ವೃತ್ತಿ ಬಳಸಿಕೊಂಡು ಜನರನ್ನು ಬ್ಲ್ಯಾಕ್‌ಮೇಲ್ ಮಾಡುವುದನ್ನು ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಖಡಕ್‌ಗಾಗಿಈ ರೀತಿ ವರ್ತನೆ ಬಿಡಬೇಕು. ತಮ್ಮ ವೃತ್ತಿಯನ್ನು ಬಳಸಿಕೊಂಡು ಬ್ಲಾಕ್‌ಮೇಲ್ ಮಾಡುವುದನ್ನು ಸಹಿಸುವುದಿಲ್ಲ ಎಂದರು.

ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾದರೆ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದು ತಾತ್ಕಾಲಿಕವಾಗಿ ನೀರಿನ ವ್ಯವಸ್ಥೆ ಮಾಡಿ. ಪ್ರತಿ ತಿಂಗಳು ಒಂದು ಬೋರ್‌ವೆಲ್‌ಗೆ 15 ಸಾವಿರ ರೂ. ನೀಡಲಾಗುತ್ತಿದೆ ಈ ಬಗ್ಗೆ ಪಿಡಿಒಗಳಿಗೆ ಅದೇಶಿಸಿ. ಕಳೆದ ಬಾರಿ ಟ್ಯಾಂಕರ್ ನೀರು ಸರಬರಾಜು ಮಾಡಿದವರಿಗೆ ಬಿಲ್ ಪಾವತಿಸುವಂತೆ ಸೂಚಿಸಿದರು.

ಸಭೆಯಲ್ಲಿ ನೀರು, ರಸ್ತೆ, ಚರಂಡಿ ಸೇರಿ ಹಲವು ಸಮಸ್ಯೆಗಳ ಬಗ್ಗೆ ಬಗ್ಗೆ ಚರ್ಚಿಸಲಾಯಿತು. ಜಿಪಂ ಸದಸ್ಯೆ ನಾಜೀಯಾ ಜವಹರ್, ಬಿಎಂಆರ್‌ಡಿಎ ಮಾಜಿ ಅಧ್ಯಕ್ಷ ಕೆ. ಕೃಷ್ಣಮೂರ್ತಿ, ಪುರಸಭೆ ಅಧ್ಯಕ್ಷೆ ಭಾಗ್ಯಮ್ಮ, ಸದಸ್ಯರಾದ ಎಂ.ಎನ್. ಮಂಜುನಾಥ್, ಹೇಮಲತಾ, ಅನಿಲ್ ಕುಮಾರ್, ಕಾಂತರಾಜು, ಗ್ರಾಪಂ ಮಾಜಿ ಅಧ್ಯಕ್ಷ ಮೂರ್ತಿ, ಎಪಿಎಂಸಿ ನಿರ್ದೇಶಕ ಮಂಜುನಾಥ್, ತಹಸೀಲ್ದಾರ್ ಬಿ.ಜಿ. ಶ್ರೀನಿವಾಸ್ ಪ್ರಸಾದ್, ತಾಪಂ ಇಒ ಟಿ. ಪ್ರದೀಪ್, ಪಿಎಸ್‌ಐ ಶ್ರೀಕಾಂತ್, ಪುರಸಭಾ ಮುಖ್ಯಾಧಿಕಾರಿ ಎಂ.ಎನ್.ಮಹೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net