ನೌಕರಿ ಕಾಯಂಗೊಳಿಸಿ

30kgl02 protest
ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ಬಳಿ ಪೌರ ಕಾರ್ಮಿಕರು ಮುಷ್ಕರ ಆರಂಭಿಸಿದರು. ಎನ್.ರವಿ ಇತರರಿದ್ದರು.
Published on

ಕಾರ್ಗಲ್: ನೌಕರಿ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ಪೌರ ಸೇವಾ ನೌಕರರು ಶನಿವಾರ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು. ಪೌರಸೇವಾ ಕಾರ್ಮಿಕರ ಸಂಘದ ಅಧ್ಯಕ್ಷ ಎನ್.ರವಿ ಮಾತನಾಡಿ, ಕಳೆದ ಏಪ್ರಿಲ್ 12ರಂದು ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ನಡೆದ ಸಂಘದ ರಾಜ್ಯ ಪರಿಷತ್ ಸಭೆಯಲ್ಲಿ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಮನವಿ ಸಲ್ಲಿಸಲಾಗಿತ್ತು. ಬೇಡಿಕೆಗಳು ಈಡೇರದ ಕಾರಣ ಮುಷ್ಕರ ಆರಂಭಿಸಲಾಗಿದೆ ಎಂದರು.

ಪ್ರಮುಖವಾಗಿ ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತುಗಳನ್ನು ಪೌರ ಸೇವಾ ನೌಕರರಿಗೂ ವಿಸ್ತರಿಸಬೇಕು. ನಗದು ರಹಿತ ಜ್ಯೋತಿ ಸಂಜೀವಿನಿ ಚಿಕಿತ್ಸಾ ಸೌಲಭ್ಯ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net