

ಬೆಂಗಳೂರು: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ. ರಂಗನಾಥ್ ಅವರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ನಾಲ್ಕು ಪುಟಗಳ ಪತ್ರ ಬರೆದಿದ್ದಾರೆ.
ಮುಖ್ಯ ನ್ಯಾಯಮೂರ್ತಿಗಳು ಬೆಳಗ್ಗೆ 11 ಗಂಟೆಗೆ ಕಲಾಪ ಆರಂಭಿಸಿ, ಸಂಜೆ ನಾಲ್ಕು ಗಂಟೆಗೆ ಕಲಾಪ ಮೊಟಕುಗೊಳಿಸುತ್ತಾರೆ. ಪ್ರಕರಣಗಳ ವಿಲೇವಾರಿ ವಿಳಂಬ ಮಾಡುತ್ತಾರೆ. ಇದರಿಂದಾಗಿ ವಿಲೇವಾರಿಯಾಗದೆ ಬಾಕಿ ಉಳಿಯುವ ಪ್ರಕರಣಗಳ ಸಂಖ್ಯೆ ಹಚ್ಚಾಗುತ್ತಿದೆ. ಸೂಕ್ತ ರೀತಿಯಲ್ಲಿ ಕಾರ್ಯ ನಿರ್ವಹಣೆ ಮಾಡಲು ಎನ್. ವಿ ಅಂಜಾರಿಯಾ ಅವರಿಗೆ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಕೋರಲಾಗಿದೆ.