ಪಂಚಾಯತ್‌ರಾಜ್ ಇಲಾಖೆ ಅಧಿಕಾರಿಗಳ ಪ್ರತಿಭಟನೆ

01tnpnewsfile01
ತಿ.ನರಸೀಪುರದ ತಾಲೂಕು ಪಂಚಾಯಿತಿ ಕಚೇರಿ ಮುಂದೆ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಪ್ರತಿಭಟನೆ ನಡೆಸಿದರು.
Published on

ಸರ್ಕಾರದ ಕ್ರಮ ಸರಿಯಲ್ಲ

ತಿ.ನರಸೀಪುರ: ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕು ಪಂಚಾಯಿತಿಗೆ ಬೆಸ್ಕಾಂ ಎಇಇ ಅವರನ್ನು ಸರ್ಕಾರ ನೇಮಿಸಿದ್ದು, ಈ ಕ್ರಮ ಸರಿಯಲ್ಲ ಎಂದು ಆರೋಪಿಸಿ ಗುರುವಾರ ತಾಲೂಕು ಪಂಚಾಯಿತಿ ಕಚೇರಿ ಮುಂದೆ ತಾಲೂಕು ಪಂಚಾಯಿತಿ ಇಒ ಕೃಷ್ಣ ಅವರ ನೇತೃತ್ವದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಪ್ರತಿಭಟನೆ ನಡೆಸಿದರು.


ಇಲ್ಲಿನ ತಾಲೂಕು ಪಂಚಾಯಿತಿ ಕಚೇರಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಮೌನ ಪ್ರತಿಭಟನೆ ನಡೆಸಿದರು. ಸರ್ಕಾರದ ಕ್ರಮ ಸರಿಯಲ್ಲ. ಹಾಗಾಗಿ ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.


ನರೇಗಾ ಹಂಗಾಮಿ ಸಹಾಯಕ ನಿರ್ದೇಶಕ ಶಶಿಕುಮಾರ್, ತಾಲೂಕು ಯೋಜನಾಧಿಕಾರಿ ಜಯಂತಿ, ಸೀಹಳ್ಳಿ ಪಿಡಿಒ ಕೃಷ್ಣಪ್ಪ, ನಾಗರಾಜು, ಮಾದೇಶ್, ರಾಜಶೇಖರ್, ತಿಲಕ್‌ರಾಜ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net