ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ

13BTP02
Published on


ಬೆಟ್ಟದಪುರ: ಸಮೀಪದ ಹಾರನಹಳ್ಳಿ ಗ್ರಾಮದ ಸಮುದಾಯ ಭವನದಲ್ಲಿ ಭಾನುವಾರ ಕಣಗಾಲು ಬಿಜೆಪಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಯಿತು.
ಮಾಜಿ ಸಚಿವ ಸಿ.ಎಚ್‌ವಿಜಯಶಂಕರ್ ಮಾತನಾಡಿ, ತಾಲೂಕಿನ ಜನತೆಯ ಋಣ ತೀರಿಸಲು ಸಲುವಾಗಿ ವಿಧಾನಸಭಾ ಚುನಾವಣೆಯಲ್ಲಿ ಒಂದು ಅವಕಾಶ ನೀಡುವಂತೆ ವರಿಷ್ಠರಲ್ಲಿ ಮನವಿ ಮಾಡಲಾಗಿದೆ. ಟಿಕೆಟ್ ದೊರೆಯುವ ವಿಶ್ವಾಸವಿದ್ದು, ನಾನೇ ಅಭ್ಯರ್ಥಿಯಾಗಿ ಘೋಷಣೆಯಾಗುವ ಸಾಧ್ಯತೆ ಇದೆ. ಹಾಗಾಗಿ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ಮಾತನಾಡಿ, ಪ್ರಧಾನಿ ಮೋದಿ ಹಾಗೂ ಸಿಎಂ ಬೊಮ್ಮಾಯಿ ರಾಜ್ಯದ ಜನತೆಗೆ ನೀಡಿರುವ ಉತ್ತಮ ಕೊಡುಗೆಗಳನ್ನು ಹಳ್ಳಿ ಹಳ್ಳಿಗೂ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ನಾನು ಕೂಡ ಮುಂದಿನ ದಿನಗಳಲ್ಲಿ ತಾಲೂಕಿನ ಪ್ರತಿಯೊಂದು ಗ್ರಾಮಗಳಿಗೂ ಭೇಟಿ ನೀಡಿ ಪಕ್ಷದ ಪರವಾಗಿ ಪ್ರಚಾರ ಮಾಡುವ ಮೂಲಕ ಕಾರ್ಯಕರ್ತರನ್ನು ಹುರಿದುಂಬಿಸುವೆ ಎಂದರು.
ಇದೇ ವೇಳೆ ಹಲವು ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡರು. ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣ್ಯ, ತಾಲೂಕು ಬಿಜೆಪಿ ಅಧ್ಯಕ್ಷ ಎಂ.ಎಂ ರಾಜೇಗೌಡ, ಮುಖಂಡರಾದ ಆರ್.ಟಿ. ಸತೀಶ್, ಯೋಗಾನಂದ್, ಮೈ.ವಿ.ರವಿಶಂಕರ್, ನಳಿನಿ, ಮಧು, ಚಂದ್ರು, ಪಿ.ಜೆ ರವಿ, ಅಣ್ಣಪ್ಪ, ವಸಂತ್‌ಕುಮಾರ್, ಹೊಸಳ್ಳಿ ವೆಂಕಟೇಶ್, ಯೋಗೇಶ್, ಮಹದೇವ್, ವಿಶ್ವನಾಥ ಅರಸ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net