`ಪಟಾಕಿ ತ್ಯಜಿಸಿ ಪರಿಸರ ಉಳಿಸಿ'ಎಲ್ಲರ ಧ್ಯೇಯವಾಕ್ಯವಾಗಲಿ / ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ / ಸುನಿಲ ಎಸ್.ಹೊಸಮನಿ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

`ಪಟಾಕಿ ತ್ಯಜಿಸಿ ಪರಿಸರ ಉಳಿಸಿ' ಪ್ರತಿಯೊಬ್ಬರ ಧ್ಯೇಯವಾಕ್ಯವಾಗಿರಲಿ ಎಲ್ಲರೂ ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ ಎಂದು ಜಿಲ್ಲಾ ಕಾನೂನುಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸುನಿಲ ಎಸ್.ಹೊಸಮನಿ ತಿಳಿಸಿದರು.

ಕೋಲಾರದ ಜಿಲ್ಲಾಸ್ಪತ್ರೆ ಮುಂಭಾಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನವಸಮಾಜ, ಪರಿಸರ ಅಭಿವೃದ್ದಿ ಸಂಸ್ಥೆ, ಲೇಕ್ ಸೈಡ್, ನೆಹರು ಯುವಕೇಂದ್ರ ಕೋಲಾರ, ಭಾರತ್ ಸ್ಕೌಟ್ಸ್ ಗೈಡ್ಸ್ ಸಂಯುಕ್ತ ಆಶ್ರಯದಲ್ಲಿ ಬುಧವಾರ ಪರಿಸರ ಸ್ನೇಹಿ ದೀಪಾವಳಿ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ಪರಿಸರ ಸಂರಕ್ಷಣೆ ಸಮಾಜದ ಪ್ರತಿಯೊಬ್ಬರ ಹೊಣೆ. ಪರಿಸರವನ್ನು ಉಳಿಸದಿದ್ದರೆ ಮುಂದಿನ ದಿನಗಳಲ್ಲಿ ಅನೇಕ ತೊಂದರೆಗಳಿಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿ, ಪಟಾಕಿ ತ್ಯಜಿಸಿ ಪರಿಸರ ಮಾಲಿನ್ಯ ತಡೆಗಟ್ಟೋಣ ನಾವೆಲ್ಲಾ ದೀಪಗಳನ್ನು ಬೆಳಗುವ ಮೂಲಕ ದೀಪಾವಳಿ ಆಚರಿಸೋಣ ಎಂದರು.

ಜಾಗೃತಿ ಜಾಥಾ ಮೂಲಕ ಸಾರ್ವಜನಿಕರಲ್ಲಿ ಪಟಾಕಿಗಳಿಂದ ಆಗುವ ಸಮಸ್ಯೆಗಳು, ಪರಿಸರಕ್ಕೆ ಅವು ಹೇಗೆ ಮಾರಕ ಎಂಬುದರ ಕುರಿತು ಅರಿವು ಮೂಡಿಸುವ ಕೆಲಸ ಮಾಡಲಾಯಿತು.

ಜಾಗೃತಿ ಜಾಥಾ ಜಿಲ್ಲಾಸ್ಪತ್ರೆ ಮುಂಭಾಗ ಆರಂಭಗೊAಡು ಎಂಜಿ ರಸ್ತೆ ಮಾರ್ಗವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಬಳಿ ಮುಕ್ತಾಯಗೊಂಡಿತು. ನ್ಯಾಯಾಧೀಶರು `ಜಾಗೃತಿ ಅರಿವು ಸಪ್ತಾಹ-೨೦೨೪ರ ಪ್ರತಿಜ್ಞಾ ವಿಧಿ ಬೋಧಿಸಿದರು.

ಜಿಲ್ಲಾ ಶಸ್ತçಚಿಕಿತ್ಸಕಿ ಡಾ.ಮಮತಾ, ನವಸಮಾಜದ ಅಧ್ಯಕ್ಷ ಡಾ.ಶಮ್ಸ್, ಅರೆಕಾಲಿಕ ಕಾನೂನು ಸ್ವಯಂಸೇವಕ ಮುಸ್ತಾಪಾ, ಸಮಾಜಸೇವಕಿ ಅಶ್ವಿನಿ ವೆಂಕಟೇಶ್, ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆ ಅಧ್ಯಕ್ಷ ನಾಗರಾಜ್ ಮತ್ತಿತರರು ಪಾಲ್ಗೊಂಡಿದ್ದರು.

ಚಿತ್ರ ೩೦ ಕೆ.ಎಲ್.ಆರ್. ೦೬೩ : ಕೋಲಾರದ ಜಿಲ್ಲಾಸ್ಪತ್ರೆ ಮುಂಭಾಗ ಬುಧವಾರ ಪರಿಸರ ಸ್ನೇಹಿ ದೀಪಾವಳಿ ಜಾಗೃತಿ ಜಾಥಾಗೆ ಹಿರಿಯ ಸಿವಿಲ್ ನ್ಯಾಯಾಧೀಶ ಸುನಿಲ ಎಸ್.ಹೊಸಮನಿ ಚಾಲನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net