ಪತಿಯ ಕುಟುಂಬಸ್ಥರಿAದ ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಪತಿಯ ಕುಟುಂಬಸ್ಥರಿAದ ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕಾಡದೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳ್ಳಿಗ್ಗೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ರಶ್ಮಿ(೨೫). ಪತಿ ಮನೆಯಲ್ಲೇ ಡೆತ್‌ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ದಿನೇಶ್ ಹಾಗೂ ರಶ್ಮಿ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಒಂದು ವರ್ಷದ ಹಿಂದೆ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು.

ಮೃತ ಮಹಿಳೆ ರಶ್ಮಿ ಡೆತ್‌ನೋಟ್‌ನಲ್ಲಿ ರೀ ಸಾರಿ ನಿಮ್ಮ ಅಮ್ಮ, ದೊಡ್ಡಮ್ಮನ ಕಾಟ ತಡೆಯೋಕೆ ಆಗುತ್ತಿಲ್ಲ. ಮದುವೆಯಾಗಿ ಬಂದಾಗಿನಿAದ ನೆಮ್ಮದಿಯೇ ಇಲ್ಲ. ನನ್ನಿಂದ ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ನನ್ನ ಗಂಡ ಒಳ್ಳೆಯವನೇ, ಆದರೆ ಮನೆಯವರು ಒಳ್ಳೆಯವರಲ್ಲ. ಅದಕ್ಕೆ ನೀವು ಬರುವಷ್ಟರಲ್ಲೇ ಸಾಯುತ್ತಿದ್ದೇನೆ, ಬೈ' ಎಂದು ಬರೆದಿದ್ದಾರೆ.

ಇತ್ತ ತಂದೆ ತಾಯಿಗೂ ಸಾರಿ ಕೇಳಿರುವ ರಶ್ಮಿ, ಅಮ್ಮ ಇಷ್ಟು ದಿನ ಇಲ್ಲಿನ ಕಷ್ಟ ಸಹಿಸಿಕೊಂಡೆ. ಇಲ್ಲಿಯವರು ಒಳ್ಳೆಯವರಲ್ಲ. ವರದಕ್ಷಿಣೆ ತಂದಿಲ್ಲ ಎಂದು ಹೊಡೆಯುತ್ತಾರೆ ಎಂದು ಬರೆದು ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ೩ ತಿಂಗಳ ಹಿಂದೆ ರಶ್ಮಿಗೆ ಗರ್ಭಪಾತವಾಗಿದ್ದು, ವರದಕ್ಷಿಣೆ ನೀಡಿಲ್ಲ, ಮಗು ಆಗಿಲ್ಲ ಎಂದು ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ.

ಪ್ರಕರಣದ ಆರೋಪಿಗಳಾದ ಪತಿ ದಿನೇಶ್ ಗೌಡ, ಮಾವ ಅಪ್ಪಾಜಿ ಗೌಡ, ಅತ್ತೆ ಸರೋಜಮ್ಮ, ದೊಡ್ಡತ್ತೆ ರತ್ನಮ್ಮರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರ ೨೫ ಕೆ.ಎಲ್.ಆರ್. ೦೭ ಪತಿಯ ಕುಟುಂಬಸ್ಥರಿAದ ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ರಶ್ಮಿ.

ಚಿತ್ರ ೨೫ ಕೆ.ಎಲ್.ಆರ್. ೦೭ ಪತಿಯ ಕುಟುಂಬಸ್ಥರಿAದ ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್ ಬರೆದಿರುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net