

ಬೆಂಗಳೂರು
ಭಾರತ್ ಮತ್ತು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕೆಲವು ಪರೀಕ್ಷೆಗಳನ್ನು ಮುಂದೂಡಿದ್ದ ಬೆಂಗಳೂರು ವಿಶ್ವವಿದ್ಯಾಲಯ ಪರಿಷ್ಕೃತ ದಿನಾಂಕಗಳನ್ನು ಬಿಡುಗಡೆ ಮಾಡಿದೆ.
ಆ ಪ್ರಕಾರವಾಗಿ ಸೆ.29ರಂದು ಆರಂಭವಾಗಬೇಕಿದ್ದ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಅ.5ರಿಂದ ಆರಂಭವಾಗಲಿದೆ. ಸೆ.25ರಂದು ನಡೆಯಬೇಕಿದ್ದ ಪದವಿ ಪರೀಕ್ಷೆ ಅ.6ರಂದು ಹಾಗೂ ಸೆ.28ರಂದು ನಡೆಯಬೇಕಿದ್ದ ಪರೀಕ್ಷೆ ಅ.4ರಂದು ನಡೆಯಲಿದೆ ಎಂದು ಬೆಂ.ವಿವಿ ಕುಲಪತಿ ಡಾ.ಕೆ.ಆರ್.ವೇಣುಗೋಪಾಲ್ ತಿಳಿಸಿದ್ದಾರೆ.