ಪರಿಸರ ಉಳಿಸಲು ಪ್ರತಿಯೊಬ್ಬರೂ ಕೈಜೋಡಿಸಿ

06 SARAG 1
ಸರಗೂರು ಪಟ್ಟಣ ಪಂಚಾಯಿತಿ ಆವರಣದಲ್ಲಿ ಪರಿಸರ ದಿನ ಆಚರಿಸಲಾಯಿತು.
Published on

ಸರಗೂರು: ಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಉಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಮನವಿ ಮಾಡಿದರು.

ಪಟ್ಟಣ ಪಂಚಾಯಿತಿ ಆವರಣದಲ್ಲಿ ಸೋಮವಾರ ಗಿಡ ನೆಟ್ಟು ನೀರೆರೆಯುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ವಿವೇಕಾನಂದ ಆಸ್ಪತ್ರೆಯ ರಸ್ತೆ ಬದಿಯಲ್ಲಿ ಪರಿಸರ ಸಂರಕ್ಷಣೆಗಾಗಿ ಗಿಡಗಳನ್ನು ಬೆಳೆಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಮುಖ್ಯಾಧಿಕಾರಿ ಮಂಜುನಾಥ್ ಮಾತನಾಡಿ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಸರ ಉಳಿಸುವ ನಿಟ್ಟಿನಲ್ಲಿ 100 ಗಿಡ ನೆಡುವ ಗುರಿ ಇದ್ದು, ಪ್ರಸ್ತುತ 50 ಗಿಡ ನೆಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು.

ಉಪಾಧ್ಯಕ್ಷರಾದ ವಿನಯ ಪ್ರಸಾದ್, ಸ್ಥಾಯಿ ಸಮಿತಿ ಅಧ್ಯಕ್ಷೆ ಊಮಾ ರಾಮು, ಸದಸ್ಯರಾದ ಶ್ರೀನಿವಾಸ್, ಶಿವಕುಮಾರ್, ಚೆಲುವ ಕೃಷ್ಣ, ಚೈತ್ರಾಸ್ವಾಮಿ, ಸಣ್ಣತಾಯಮ್ಮ, ಸ್ವಾಮಿ, ದಿವ್ಯಾ ನವೀನ್, ಪುಟ್ಟಹನುಮಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net