ಪರಿಸರ ಮಾಲಿನ್ಯದಿಂದ ಪ್ರಾಣಿಗಳ ಮೇಲೆ ದುಷ್ಪರಿಣಾಮ

hd kote 1
ವಿಶ್ವ ಪರಿಸರ ದಿನದ ಅಂಗವಾಗಿ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಹರ್ಷಕುಮಾರ್ ಚಿಕ್ಕನರಗುಂದ ಮಾತನಾಡಿದರು.
Published on

ಎಚ್.ಡಿ.ಕೋಟೆ: ಪರಿಸರ ಮಾಲಿನ್ಯವು ಕಾಡು ಪ್ರಾಣಿಗಳ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದರು.

ತಾಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಸೋಮವಾರ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಿಸರ ಪ್ರತಿಯೊಂದು ಜೀವಿಗೆ ಎಷ್ಟು ಮುಖ್ಯ ಎನ್ನುವುದರ ಬಗ್ಗೆ ಅರಿವು ಮೂಡಿಸಲು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ ಎಂದರು.

ಭೂಮಿಯನ್ನು ಮುಂದಿನ ಪೀಳಿಗೆಗೆ ಉಳಿಸುವುದು ನಮ್ಮ ಕರ್ತವ್ಯ. ಹಸಿರಾದ ಭೂಮಿ ಈಗ ಕಡಿಮೆಯಾಗುತ್ತಿದೆ. ಹಾಗಾಗಿ, ಎಚ್ಚರಿಕೆಯಿಂದ ಪರಿಸರ ಕಾಪಾಡಿಕೊಳ್ಳಬೇಕಾಗಿದೆ. ಜಾಗತಿಕ ತಾಪಮಾನ ಏರಿಕೆಯು ಒಂದು ದೊಡ್ಡ ಸವಾಲಾಗಿದ್ದು, ಆರೋಗ್ಯಕರ ಜೀವನ ನಡೆಸಲು ಮತ್ತು ಪ್ರಕೃತಿಯ ರಕ್ಷಣೆ ಮಾಡಲು ಹರಸಾಹಸಪಡಬೇಕಾಗಿದೆ. ಇವೆಲ್ಲ ಕಾರಣದಿಂದ ಜನರನ್ನು ಜಾಗೃತಗೊಳಿಸಲು ಪರಿಸರ ದಿನವನ್ನಾಗಿ ಆಚರಿಸಲಾಗುತ್ತದೆ ಎಂದರು.

ಎಚ್.ಡಿ.ಕೋಟೆ ಪಟ್ಟಣದ ಆದಿಚುಂಚನಗಿರಿ ಪದವಿ ಕಾಲೇಜಿನ 150 ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಂಗಸ್ವಾಮಿ, ಕಾಲೇಜಿನ ಪ್ರಾಂಶುಪಾಲ ಜೆ.ಎನ್.ವೆಂಕಟೇಶ್, ವಲಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೆ.ಎಲ್.ಮಧು, ಸಿದ್ದರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net