ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

police
Published on

ಮೈಸೂರು: ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ 09 ಪರೀಕ್ಷಾ ಕೇಂದ್ರಗಳಲ್ಲಿ ಜುಲೈ 20 ರಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಸಂಸ್ಥೆಯ ನೇಮಕಾತಿಯ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆಯು ನಡೆಯಲಿದ್ದು, ಮಧ್ಯಾಹ್ನ 12:30 ಗಂಟೆಯಿoದ ಸಂಜೆ 6 ಗಂಟೆಯವರೆ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ಸೆಕ್ಷನ್ 163 ರೀತ್ಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಪೀಪಲ್ಸ್ ಪಾರ್ಕ್ನ ಸರ್ಕಾರಿ ಬಾಲಕಿಯರ ಪಿಯು ಕಾಲೇಜು, ದೇವರಾಜ ಮೊಹಲ್ಲಾದ ದೇವರಾಜ ಸರ್ಕಾರಿ ಬಾಲಕಿಯರ ಪಿಯು ಕಾಲೇಜು, ನ್ಯೂ ಸಯ್ಯಾಜಿ ರಾವ್ ರಸ್ತೆಯ ಡಿ.ಬನುಮಯ್ಯ ಪಿಯು ಕಾಲೇಜು, ಒಂಟಿಕೊಪ್ಪಲಿನ ಮಾತೃ ಮಂಡಳಿ ವೃತ್ತದ ಸರ್ಕಾರಿ ಪಿಯು ಕಾಲೇಜು, ಜಯಲಕ್ಷ್ಮೀಪುರಂನ ಎಸ್‌ಬಿಆರ್‌ಆರ್ ಮಹಾಜನ ಪಿಯು ಕಾಲೇಜು, ಕಾಳಿದಾಸ ರಸ್ತೆಯ ಶ್ರೀ ವಿವೇಕಾನಂದ ಪಿಯು ಕಾಲೇಜು, ನಾರಾಯಣ ಶಾಸ್ತ್ರೀ  ರಸ್ತೆಯ ಮಹಾರಾಣಿ ಸರ್ಕಾರಿ ಪಿಯು ಕಾಲೇಜು, ಸೀತಾವಿಲಾಸ ರಸ್ತೆಯ ಮರಿಮಲ್ಲಪ್ಪ ಪ್ರೌಢಶಾಲೆ, ಜೆಎಲ್‌ಬಿ ರಸ್ತೆಯ ಮಹಾರಾಜ ಸರ್ಕಾರಿ ಪಿಯು ಕಾಲೇಜು ಪರೀಕ್ಷಾ ಕೆಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

 ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗಳನ್ನು ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರು ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಥವಾ ಸೈಬರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಆದೇಶಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net