

ಮೇ 15 ರಿಂದ 27 ರವರೆಗೆ ಮೈಸೂರು ನಗರದ “ಮಹಾರಾಣಿ ಟಿ.ಟಿ.ಐ. ಪ್ರಶಿಕ್ಷಣ ಸಂಸ್ಥೆ , ನಾರಾಯಣ ಶಾಸ್ತ್ರಿ ರಸ್ತೆ, ಮೈಸೂರು” ಇಲ್ಲಿ ಡಿ.ಇಎಲ್.ಇಡಿ ಮುಖ್ಯ ಪರೀಕ್ಷೆಗಳು ನಡೆಯಲಿದ್ದು, ಸದರಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ಸೆಕ್ಷನ್ 163 ರೀತ್ಯ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ.
ಈ ಪ್ರದೇಶದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗಳನ್ನು ಹೊರತುಪಡಿಸಿ ಇತರೆ ಅನಧೀಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರು ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು ಹಾಗೂ ಪರೀಕ್ಷೆ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್/ ಬ್ರೌಸಿಂಗ್ ಸೆಂಟರ್‌ಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಆದೇಶಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.