ಪಾರದರ್ಶಕ ಚುನಾವಣೆಗೆ ಸಜ್ಜಾಗಿ

21ydg02
Published on


ಯಾದಗಿರಿ: ವಿಧಾನಸಭೆ ಚುನಾವಣೆಯನ್ನು ಪಾರದರ್ಶಕ, ನಿಭರ್ೀತ, ನ್ಯಾಯ ಸಮ್ಮತ ಹಾಗೂ ಸುವ್ಯವಸ್ಥಿತ ಚುನಾವಣೆ ನಡೆಯುವಂತೆ ನೋಡಿಕೊಳ್ಳುವ ಮೂಲಕ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಕಾರಿಯೂ ಆದ ಜಿಲ್ಲಾಕಾರಿ ಸ್ನೇಹಲ್ ಆರ್., ಅಕಾರಿಗಳಿಗೆ ನಿದರ್ೇಶನ ನೀಡಿದರು.

ಮಂಗಳವಾರ ಇಲ್ಲಿನ ಜಿಲ್ಲಾಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಧಾನ ಸಭಾ ಚುನಾವಣೆ ಸುಗಮವಾಗಿ ನಡೆಸುವ ಕುರಿತಂತೆ ಕರೆದಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, ಆಯೋಗವು ಚುನಾವಣಾ ಪ್ರಕ್ರಿಯೆ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದು, ಮುಖ್ಯವಾಗಿ ನೀತಿ ಸಂಹಿತೆ ಪೂರ್ವ ಹಲವು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದರು.

ಅಕ್ರಮ ಮದ್ಯ ಸಾಗಾಣಿಕೆ ಹಾಗೂ ಇತರೆ ಚುನಾವಣಾ ಸಂಬಂತ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಬೇಕಿದೆ. ಜಿಲ್ಲೆಯಲ್ಲಿ ಅಂತಾರಾಜ್ಯ ಚೆಕ್ ಫೋಸ್ಟ್ ಗುರುತಿಸಿ. ಅಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸುವುದೂ ಸೇರಿ ಅಗತ್ಯ ಸಿಬ್ಬಂದಿ ನಿಯೋಜನೆ ಹಾಗೂ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಸೂಚಿಸಿದರು.

ಚೆಕ್ ಪೋಸ್ಟ್ನಲ್ಲಿ ನಿಯೋಜಿತ ತಂಡವು ಪ್ರತಿ ವರದಿಯನ್ನು ತಪ್ಪದೇ ಸಲ್ಲಿಸುವುದು. ತುತರ್ು ಸಂದರ್ಭದಲ್ಲಿ ತಕ್ಷಣ ವರದಿ ನೀಡುವುದು. ಪೊಲೀಸ್, ಅಬಕಾರಿ, ವಾಣಿಜ್ಯ ತೆರಿಗೆ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಆದಾಯ ತೆರಿಗೆ ಇಲಾಖೆಯ ಅಕಾರಿಗಳು ನಿಯಮಾನುಸಾರ ವರದಿ ನೀಡಬೇಕು. ಚುನಾವಣಾ ಕಾರ್ಯಕ್ಕೆ ನಿಯೋಜಿತ ತಂಡಗಳು ಸಮನ್ವಯತೆಯಿಂದ ಖುದ್ದಾಗಿ ಪರಿಶೀಲಿಸಿ, ವರದಿ ನೀಡಬೇಕು. ಚುನಾವಣಾ ವಿಷಯಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಯಾವುದೇ ಕರ್ತವ್ಯ ಲೋಪವಾಗದಂತೆ ತೊಡಗಿಸಿಕೊಳ್ಳುವಂತೆ ತಿಳಿಸಿದರು.

ಚುನಾವಣೆಯನ್ನು ಸುಗಮವಾಗಿ ನಡೆಯಲು ಮೊದಲೇ ಸಿದ್ಧತೆ ಮಾಡಿಕೊಳ್ಳಬೇಕು. ಸಾಮಾಜಿಕ ಜಾಲ ತಾಣಗಳ ಮೇಲೆ ನಿಗಾ ವಹಿಸಬೇಕು. ಸಂಶಯಾಸ್ಪದ ಎನಿಸಿದ ವಿಷಯಗಳ ಕುರಿತು ತಮ್ಮ ಗಮನಕ್ಕೆ ತರಬೇಕು ಎಂದರು.

ಜಿಪಂ ಸಿಇಒ ಅಮರೇಶ ಆರ್. ನಾಯ್ಕ, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಾ.ಸಿ.ಬಿ ವೇದಮೂತರ್ಿ, ಸಹಾಯಕ ಆಯುಕ್ತ ಶಾ ಆಲಂ ಹುಸೇನ್, ಚುನಾವಣೆ ತಹಸಿಲ್ದಾರ ಸಂತೋಷರಾಣಿ, ಸಾರಿಗೆ ಅಕಾರಿ ವಿನಯ್ ಕಾಟೋಕರ್, ತಹಸಿಲ್ದಾರ ಅಣ್ಣಾರಾವ್ ಪಾಟೀಲ್, ಸುಬ್ಬಣ್ಣ ಜಮಖಂಡಿ, ಜಗದೀಶ್ ಚೌರ್, ಹಲೀಮ್, ಉಮಾಶಂಕರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net